ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಧಾರವಾಡ ಡಿಸಿ ಕರ್ತವ್ಯಲೋಪ: ಹಿರೇಮಠ

Srinivasa Murthy VN
Updated On : 2 Sept 2013, 1:30 am

ಹುಬ್ಬಳ್ಳಿ: ಹುಬ್ಬಳ್ಳಿ ಸ್ಪೋರ್ಟ್ಸ್ ಮೈದಾನದಲ್ಲಿ ಮಸಾಜ್ ಪಾರ್ಲರ್ ಮತ್ತು ರಿಕ್ರಿಯೆಷನ್ ಚಟುವಟಿಕೆಗಳಿಗೆ ಅನುಮತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಅಂದಿನ ಜಿಲ್ಲಾಧಿಕಾರಿ ದರ್ಪಣ್ ಜೈನ್ ಅವರಿಂದ ಗಂಭೀರ ಪ್ರಮಾಣದಲ್ಲಿ ಕರ್ತವ್ಯಲೋಪ ಆಗಿದ್ದು, ಈ ನಿಟ್ಟಿನಲ್ಲಿ ಸಿಬಿಐ ತನಿಖೆಯಾಗಬೇಕು ಸಮಾಜ ಪರಿವರ್ತನ ಸಮುದಾಯದ ಎಂದು ಎಸ್.ಆರ್. ಹಿರೇಮಠ ಹೇಳಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಿಟಿಷರ ಆಡಳಿತಾವಧಿಯಲ್ಲಿ ಕರ್ನಾಟಕ ಜಿಮಖಾನಾ ಕ್ಲಬ್‌ಗೆ ಕೇವಲ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಹುಬ್ಬಳ್ಳಿ ಸ್ಪೋರ್ಟ್ಸ್ ಗ್ರೌಂಡ್ ನೀಡಲಾಗಿತ್ತೇ ವಿನಃ ಆ ಮೈದಾನದಲ್ಲಿ ಮದ್ಯಾರಾಧನೆ ಮತ್ತಿತರ ಚಟುವಟಿಕೆಗಳಿಗೆ ಆಸ್ಪದ ನೀಡಿರಲಿಲ್ಲ ಎಂದರು. ಇಡೀ ಮೈದಾನವನ್ನು ಕಬಳಿಸುವ ಮೂಲಕ ಕರ್ನಾಟಕದ ಜನರಿಗೆ ಮೋಸ ಮಾಡುವ ಕೆಲಸ ಕೆಲವು ವ್ಯಕ್ತಿಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದರು. ಗ್ರೌಂಡ್ ಬಚಾವೋ ಸಮಿತಿ ಹೆಸರಿನಲ್ಲಿ ನಾಗರಿಕರು ಪಾಟೀಲ್ ಪುಟ್ಟಪ್ಪ ಅವರ ನೇತೃತ್ವದಲ್ಲಿ ಹೋರಾಟ ಮಾಡುತ್ತಿದ್ದು, ರಿಕ್ರಿಯೆಷನ್ ಕ್ಲಬ್ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಪೂರಕ ದಾಖಲೆ ಒದಗಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದರು. ಬೆಂಗಳೂರು ಮಹಾನಗರದ ವ್ಯಾಪ್ತಿಯ ಭೈರಸಂದ್ರ ಕೆರೆ ಒತ್ತುವರಿ ತೆರವುಗೊಳಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement