ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಶ್ರೀ ಗುರುಸಿದ್ಧ ಶ್ರೀಗಳಿಂದ ಮನೆ ಮನೆಗೆ ಸ್ವಾಮಿ ವಿವೇಕಾನಂದ ಅಭಿಯಾನಕ್ಕೆ ಚಾಲನೆ

Vishwanath S
Updated On : 2 Sept 2013, 11:27 am

ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಸ್ವಾಮಿ ವಿವೇಕಾನಂದ ಸಾರ್ಧಶತೀ ಸಮಾರೋಪ ಸಮಿತಿ ವತಿಯಿಂದ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 'ಮನೆ ಮನೆಗೆ ಸ್ವಾಮಿ ವಿವೇಕಾನಂದ ಅಭಿಯಾನ'ಕ್ಕೆ ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು.
ಅಭಿಯಾನದ ಅಂಗವಾಗಿ ನಗರದ 50 ಸಾವಿರ ಮನೆಗಳಿಗೆ ಸ್ವಾಮಿ ವಿವೇಕಾನಂದರ ವಿಚಾರಗಳನ್ನೊಳಗೊಂಡ ಕರಪತ್ರ, ಪುಸ್ತಕ ಹಾಗೂ ಭಾವಚಿತ್ರಗಳನ್ನು ಕಾರ್ಯಕರ್ತರು ತಲುಪಿಸಿದರು. ನಗರದ ವಿವಿಧ 60 ಸ್ಥಳಗಳಲ್ಲಿ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಮರಿಪೇಟದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಇಂದಿನ ಯುವಕರು ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮಹಾನಗರ ಪಾಲಿಕೆ ಸದಸ್ಯ ಡಿ.ಕೆ. ಚವ್ಹಾಣ, ರಘು ಅಕಮಂಚಿ, ಮಹೇಂದ್ರ ಕೌತಾಳಕರ ಮತ್ತಿತರರು ಹಾಜರಿದ್ದರು. ಸುಮಾರು 4 ಸಾವಿರ ಕಾರ್ಯಕರ್ತರು 450 ತಂಡಗಳಲ್ಲಿ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಮನೆ ಮನೆಗೆ ತಲುಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement