ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಜೆಡಿಎಸ್: ನೇಮಕ

Vishwanath S
Updated On : 4 Sept 2013, 12:37 pm

ಹುಬ್ಬಳ್ಳಿ: ಜೆಡಿಎಸ್ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಗರದ ರಾಮನಾಥ ಶೆಣೈ ನೇಮಕಗೊಂಡಿದ್ದಾರೆ. ರಾಮನಾಥ ಅವರನ್ನು ಘಟಕದ ಅಧ್ಯಕ್ಷ ಎಸ್. ಮಧುಬಂಗಾರಪ್ಪ ನೇಮಕಗೊಳಿಸಿದ್ದಾರೆ.
ವಿದ್ಯುತ್ ಸ್ಪರ್ಶ: ಸಾವು
ಹುಬ್ಬಳ್ಳಿ: ಬೈರಿದೇವರಕೊಪ್ಪದ ಬೆಲ್ಲದ ಹುಂಡೈ ಶೋರೂಂನಲ್ಲಿ ಕಾರು ಖರೀದಿಸುವುದಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಕುರಿತು ಎಪಿಎಂಸಿ, ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಳೇ ಹುಬ್ಬಳ್ಳಿಯ ಕುಂಬಾರಸಾಲ ಪ್ರದೇಶದ ಬಸವರಾಜ ರಾಮಣ್ಣ ಕಂಬಾರ ಅವರು ಕಾರು ಖರೀದಿಸುವುದಕ್ಕೆ ಎಂದು ಬೆಲ್ಲದ ಹುಂಡೈ ಶೋರೂಂಗೆ ರಾಮಣ್ಣ ಕಂಬಾರ ಅವರೊಂದಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಸವರಾಜ ಕಂಬಾರ ಮೃತಪಟ್ಟಿದ್ದಾರೆ.
ಡಿಕ್ಕಿ: ಓರ್ವ ಸಾವು
ಧಾರವಾಡ: ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾದ ಘಟನೆ ಇಲ್ಲಿನ ನವಲೂರ ಸೇತುವೆ ಬಳಿ ಮಂಗಳವಾರ ನಡೆದಿದೆ. ಇಲ್ಲಿನ ಮಾಳಮಡ್ಡಿಯ ನಿವಾಸಿ ಅಲ್ತ್‌ಮೇಶ ಹುಲಕೊಪ್ಪ(28) ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಅಲ್ಲದೇ, ನಗರದ ಶಿವಾನಂದ ನಗರದ ನಿವಾಸಿ ಮತ್ತು ಬೈಕ್ ಹಿಂಬದಿಯ ಸವಾರ ಜನೇದ ಸೊಲ್ಲಾಪುರ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ತೀವ್ರ ಗಾಯಾಳುಗಳಾಗಿದ್ದ ಇಬ್ಬರನ್ನು ಸಮೀಪದ ಎಸ್‌ಡಿಎಂ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ಅಲ್ತ್‌ಮೇಶ ಸಂಜೆ 4.30ಕ್ಕೆ ಮೃತಪಟ್ಟಿದ್ದಾರೆ. ಜನೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದಾನಂದ ಜಾಧವ
ಧಾರವಾಡ: ಇಲ್ಲಿಯ ಸಾಧನಕೇರಿ ನಿವಾಸಿ ಹಾಗೂ ನವಲಗುಂದ ತಾಲೂಕಿನ ಗೊಬ್ಬರಗುಂದಿ ಶಾಲೆ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಸದಾನಂದ ಆನಂದ ಜಾಧವ (52) ಮಂಗಳವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವಿದೆ.
ಯೊನತಾನ ಮುತ್ತಲಗೇರಿ
ಧಾರವಾಡ: ಇಲ್ಲಿನ ಶಿವಾನಂದ ನಗರದ ನಿವಾಸಿ ಯೊನತಾನ ಚನ್ನಪ್ಪ ಮುತ್ತಲಗೇರಿ(81) ಮಂಗಳವಾರ ನಿಧನರಾದರು. ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments