ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ರಿಕ್ರಿಯೇಶನ್ ಕ್ಲಬ್: ಶೆಟ್ಟರ್-ಲಾಡ್ ಹೇಳಿಕೆ

Vishwanath S
Updated On : 8 Sept 2013, 11:33 am

ಹುಬ್ಬಳ್ಳಿ: ಜಿಮಖಾನಾ ಮೈದಾನ ವಿಷಯದಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡು ರಾಜಕೀಯ ತೇಜೋವಧೆ ಮಾಡುವ ಸಂಚು ನಡೆಯುತ್ತಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅಸಮಾಧಾನ ಹೊರಗೆಡವಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಮಖಾನಾ ಮೈದಾನದ ಪದಾಧಿಕಾರಿ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದರೆ ಸಮಸ್ಯೆ ಪರಿಹಾರವಾದಂತಲ್ಲ. ಮೈದಾನದ ವಿಷಯವಾಗಿ ನಿರ್ಧಾರ ಕೈಗೊಳ್ಳುವ ಎಲ್ಲ ಅವಕಾಶವೂ ಸರ್ಕಾರದ ಬಳಿ ಇದೆ. ಸರ್ಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿ. ಈ ಬಗ್ಗೆ ತಮ್ಮದೇನೂ ಅಭ್ಯಂತರವಿಲ್ಲ.
ಜಿಮಖಾನ್ ಮೈದಾನದ ವಿಷಯವನ್ನು ಮುಂದಿಟ್ಟುಕೊಂಡು ಕೆಲ ಆಗದವರು ರಾಜಕೀಯ ತೇಜೋವಧೆ ಮಾಡುತ್ತಿದ್ದಾರೆ. ಅಸಲಿಗೆ ಇವರಿಗೆ ಮೈದಾನ ಬೇಕಿಲ್ಲ. ಇಂಥವರು ಕರೆಯುವ ಸಭೆಗೆ ನಾನೇಕೆ ಹೋಗಲಿ ಎಂದರು.
ರಾಜಕೀಯ ಹುನ್ನಾರವಿಲ್ಲ: ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಸಂತೋಷ ಲಾಡ್, ಸಂಸದ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಜಿಮಖಾನಾ ಮೈದಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜಕೀಯ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಬೆರೆಸುತ್ತಿಲ್ಲ. ನಾಡಿನ ಹಿರಿಯ ವ್ಯಕ್ತಿ ಡಾ. ಪಾಟೀಲ ಪುಟ್ಟಪ್ಪ ಹೋರಾಟದ ನೇತೃತ್ವ ವಹಿಸಿದ್ದಾರೆ. ಹಾಗಾಗಿ ಎಲ್ಲ ಪಕ್ಷಗಳು ರಿಕ್ರಿಯೆಷನ್ ಕ್ಲಬ್ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement