ಅಂತಿಮ ತೀರ್ಮಾನ ಸರ್ಕಾರದ್ದು: ಸಚಿವ ಲಾಡ್
ಹುಬ್ಬಳ್ಳಿ: ಹುಬ್ಬಳ್ಳಿ ಸ್ಪೋರ್ಟ್ಸ್ ಜಿಮಖಾನಾ ಮೈದಾನಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ನಡುವೆ ಒಮ್ಮತಾಭಿಪ್ರಾಯ ಮೂಡಿಸುವುದಕ್ಕೆ ಯತ್ನಿಸಲಾಗುವುದು. ಒಂದು ವೇಳೆ ಒಮ್ಮತಾಭಿಪ್ರಾಯ ಮೂಡದಿದ್ದಲ್ಲಿ ಸರ್ಕಾರ ತನ್ನ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಭಾನುವಾರ ಕಿಮ್ಸ್ನಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಅವರು ಶನಿವಾರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಸರ್ಕಾರ ಇನ್ನೂ ವರದಿಯನ್ನೂ ನೋಡಿಲ್ಲ. ಆದ್ದರಿಂದ ಕ್ರಮ ತೆಗೆದುಕೊಳ್ಳುವಲ್ಲಿ ವಿಳಂಬವಾಗಿದ್ದು ಆದಷ್ಟು ಬೇಗ ಮೈದಾನ ವಿವಾದ ಪರಿಹಾರಕ್ಕೆ ಯತ್ನಿಸಲಾಗುವುದು ಎಂದರು.
ಕಿಮ್ಸ್ನಲ್ಲಿ ಏಡ್ಸ್ ರೋಗಿಯೊಬ್ಬನಿಗೆ ಚಿಕಿತ್ಸೆ ನೀಡುವುದಕ್ಕೆ ನಿರಾಕರಿಸಿದ ಘಟನೆ ಬಗ್ಗೆ ಮಾಹಿತಿ ಇರಲಿಲ್ಲ. ಈ ನಿಟ್ಟಿನಲ್ಲಿ ಕಿಮ್ಸ್ ನಿರ್ದೇಶಕಿ ಡಾ. ವಸಂತಾ ಕಾಮತ್ ಅವರೊಂದಿಗೆ ವರದಿ ಪಡೆದು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.