ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ವಿದ್ಯಾರ್ಥಿಗಳಿಗೆ ಗುರಿ ಅವಶ್ಯಕ

Lingaraj Badiger
Updated On : 16 Sept 2013, 11:34 am

ಧಾರವಾಡ: ವಿದ್ಯಾರ್ಥಿಗಳು ಜೀವನದಲ್ಲಿ ಉದ್ದೇಶಿತ ಗುರಿಯೊಂದಿಗೆ ಸಮಯ ಪ್ರಜ್ಞೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷ ಡಾ.ಕೆ. ನಟರಾಜನ್ ಹೇಳಿದರು.
ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರ, ಮಹಾಂತ ಕಾಲೇಜು, ನ್ಯಾಯಾವಾದಿಗಳ ಸಂಘ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ವಾರ್ತಾ ಇಲಾಖೆ ಜಂಟಿಯಾಗಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ದೇಶದ ಅಭಿವೃದ್ಧಿಗಾಗಿ ಅವಶ್ಯಕವಿರುವ ಎಲ್ಲ ತರಬೇತಿಗಳನ್ನು ವಿದ್ಯಾರ್ಥಿಗಳು ತಿಳಿಯಬೇಕು. ಅಲ್ಲದೆ, ದೇಶ ಕಟ್ಟುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಧಾರವಾಡ ವಕೀಲರ ಸಂಘದ ಅಧ್ಯಕ್ಷ ವಿ.ಡಿ. ಕಾಮರೆಡ್ಡಿ, ನ್ಯಾಯವಾದಿ ಬಿ.ಎಸ್. ಸಂಗಟಿ, ನ್ಯಾಯವಾದಿ ಪಿ.ಎಚ್. ನೀರಲಕೇರಿ ಮಾತನಾಡಿದರು.
ಮಹಾಂತ ಕಾಲೇಜಿನ ಪ್ರಾಚಾರ್ಯ ಪ್ರೊ. ಎನ್.ಆರ್. ಬಾಳಿಕಾಯಿ ಅಧ್ಯಕ್ಷತೆ ವಹಿಸಿದ್ದರು. ಪ್ರಪುಲ್ಲಾ ನಾಯಕ, ಹೊಸಮನಿ ಸಿದ್ದಪ್ಪ ಸ್ವಾಗತಿಸಿದರು. ವಿವೇಕ ವಂದಿಸಿದರು. ಅಶ್ವಿನಿ ನಿರೂಪಿಸಿದರು. ನಂತರ ಡಾ. ವೈ.ಎಸ್. ಬಾರೀಗಿಡದ ಹಾಗೂ ಪ್ರೊ.ಎಂ.ಬಿ. ಅಗಳವಾಡಿ ಅವರ ನೇತೃತ್ವದಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳು, ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement