ಉಚಿತ ತರಬೇತಿ
ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಸ್ವರ್ಣ ಜಯಂತಿ ಶಹರಿ ರೋಜಗಾರ ಯೋಜನೆಯಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಯಲ್ಲಿ ಸಿಎನ್ಸಿ ಮಿಲ್ಲಿಂಗ್, ಸಿಎನ್ಸಿ ಟರ್ನಿಂಗ್, ಟರ್ನರ್, ಮಿಲ್ಲರ್, ಗ್ರೈಂಡರ್ ಮತ್ತು ಅಟೋಕ್ಯಾಡ್ ತರಬೇತಿ ಆಯೋಜಿಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅರ್ಹ ಬಡ ಫಲಾನುಭವಿಗಳಿಗೆ ಜಿಟಿಟಿಸಿ, ಗೋಕುಲ ರಸ್ತೆ, ಹುಬ್ಬಳ್ಳಿ ಮತ್ತು ಜಿಟಿಟಿಸಿ, ರಾಯಾಪುರ, ಧಾರವಾಡದಲ್ಲಿ ಉಚಿತ ತರಬೇತಿ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಪೆಂಡ್ ಸಹಿತ ಮತ್ತು ಉದ್ಯೋಗ ಖಾತರಿಯೊಂದಿಗೆ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಸೆ. 30 ಕೊನೆಯ ದಿನ. ಸ್ವರ್ಣ ಜಯಂತಿ ಶಹರಿ ರೋಜಗಾರ ಯೋಜನೆ ಕಾರ್ಯಾಲಯ, ಟೌನ್ ಹಾಲ್, ಹುಬ್ಬಳ್ಳಿ ಇಲ್ಲಿಗೆ ಅರ್ಜಿ ಸಲ್ಲಿಸಬೇಕು.
ಮಾಹಿತಿ ನೀಡುವಂತೆ ಆದೇಶ
ಧಾರವಾಡ: ಮಾಹಿತಿ ಹಕ್ಕು ಅಧಿನಿಯಮದಡಿ ಮಾಹಿತಿ ಕೋರಿದ್ದ ಅರ್ಜಿದಾರರಿಗೆ ಮಾಹಿತಿ ನೀಡದ ಅಧಿಕಾರಿಗೆ ಇದೀಗ ಮಾಹಿತಿ ನೀಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಆದೇಶ ನೀಡಿದ್ದಾರೆ. ಕುಂದಗೋಳ ತಾಲೂಕಿನ ದೇವನೂರು ಗ್ರಾಮದ ಗಂಗಾಧರ ಪಾಟೀಲ ಎಂಬವರು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಸಹಾಯಕ ಕೃಷಿ ಅಧಿಕಾರಿ ಎಚ್.ಎಂ. ಬದಾಮಿ ಅವರು ಕಲಘಟಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ಇಲಾಖೆಯಿಂದ ರೈತರಿಗೆ ನೀಡಬೇಕಿದ್ದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು ಎನ್ನ್ನಲಾಗಿದೆ. ಈ ಹಿನ್ನ್ನೆಲೆಯಲ್ಲಿ ರೈತರಿಗೆ ನೀಡಿದ ಚೆಕ್ಗಳ ಬಗ್ಗೆ ಮಾಹಿತಿ ನೀಡುವಂತೆ ಬದಾಮಿ ಅವರು ಅರ್ಜಿದಾರ ಗಂಗಾಧರ ಪಾಟೀಲ ಅವರಿಗೆ ಮಾಹಿತಿ ನೀಡಲು ನಿರಾಕರಿಸಿದ್ದರು. ಬಳಿಕ ಗಂಗಾಧರ ಪಾಟೀಲ ಅವರು ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕರಿಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಸಹಾಯಕ ಕೃಷಿ ಅಧಿಕಾರಿ ಎಚ್.ಎಂ. ಬದಾಮಿ ಅವರಿಗೆ ಅಪರ ನಿರ್ದೇಶಕರು ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಮಾಹಿತಿ ಕಾರ್ಯಾಗಾರ
ಹುಬ್ಬಳ್ಳಿ: ದೂರಸಂಪರ್ಕ ಗ್ರಾಹಕರ ಹಕ್ಕು ಮತ್ತು ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರದ ವತಿಯಿಂದ ದೂರಸಂಪರ್ಕ ಗ್ರಾಹಕರ ಮಾಹಿತಿ ಕಾರ್ಯಾಗಾರವನ್ನು ಹುಬ್ಬಳ್ಳಿಯಲ್ಲಿ ಏರ್ಪಡಿಸಲಾಗಿತ್ತು. ಡಾ ಸಿಬಿಚೆನ್ ಕೆ. ಮ್ಯಾಥ್ಯೂ, ಗ್ರಾಹಕರ ಹಿತಾಸಕ್ತ್ನಿ ಕಾಪಾಡಲು ಟ್ರಾಯ್ ತೆಗೆದುಕೊಂಡ ಕ್ರಮ ವಿವರಿಸುತ್ತಾ, ಗ್ರಾಹಕರು ದೂರುಗಳ ನಿರ್ವಹಣೆಗಾಗಿ, ಗ್ರಾಹಕರ ದೂರು ಕೇಂದ್ರದಲ್ಲಿ ದೂರು ನೋಂದಾಯಿಸಬೇಕು. ಒಂದು ವೇಳೆ ಗ್ರಾಹಕರಿಗೆ ದೂರು ನಿವಾರಣೆಯ ಕುರಿತು ಅತೃಪ್ತಿಯಿದ್ದಲ್ಲಿ, ದೂರಿನ ನಿವಾರಣೆಗೆ ಮೇಲ್ಮನವಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬಹುದು. ಮೇಲ್ಮನವಿ ಪ್ರಾಧಿಕಾರದ ಸಂಪರ್ಕ ವಿವರಗಳು ಸ್ಪಾರ್ಟ್ ಅಪ್ ಕಿಟ್, ಸರ್ವೀಸ್ ಪ್ರೊವೈಡರ್ ರವರ ವೆಬ್ಸೈಟ್ ಹಾಗೂ ಅವರ ಮಾರಾಟ ಮಳಿಗೆಗಳಲ್ಲಿ ಲಭ್ಯವಿರುತ್ತದೆ ಎಂದರು. ಲತಾ ಘಿಚ್.ಸಿ., ಮುರಳೀಧರ ಕೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.