ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ನನಗೂ ತಪಸಿ ಪ್ರಕರಣಕ್ಕೂ ಸಂಬಂಧವಿಲ್ಲ

Mainashree
Updated On : 23 Sept 2013, 11:33 am

ಗೋಕಾಕ: ತಪಸಿಯ ರೇಣುಕಾ ಬಾಳಪ್ಪ ನಾಯಿಕ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಇಲ್ಲಿಯ ತಮ್ಮ ಗೃಹ ಕಚೇರಿ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾ ನಾಯಿಕ ಅವರು ಬಾಲಚಂದ್ರ ಜಾರಕಿಹೊಳಿ ಬೆಂಬಲಿಗರು ಬೆತ್ತಲೆಗೊಳಿಸಿದ್ದಾರೆ. ಊರಿನಿಂದ ಬಹಿಷ್ಕಾರ ಹಾಕಿದ್ದಾರೆ ಎಂದು ಮುಖ್ಯಮಂತ್ರಿಗೆ ಸೆಪ್ಟೆಂಬರ್ 3ರಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಎಸ್ಪಿಗೆ ಈ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದ್ದರು. ಆದರೆ ಈ ಘಟನೆಯಲ್ಲಿ ತಮ್ಮ ಪಾತ್ರವೇನು ಇಲ್ಲ. ತಮ್ಮ ಹೆಸರಿಗೆ ಚ್ಯುತಿ ತರುವ ಪ್ರಯತ್ನ ಇದಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.
ಅರಬಾವಿ ಮತಕ್ಷೇತ್ರದಲ್ಲಿ ತಮಗೆ ಯಾರೂ ರಾಜಕೀಯ ವಿರೋಧಿಗಳಿಲ್ಲ. ಎಲ್ಲರನ್ನು ಸಹೋದರತ್ವ ಭಾವನೆಯಿಂದ ತಿಳಿದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇನೆ. ರೇಣುಕಾ ನಾಯಿಕ ಅವರು ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಭಾನುವಾರ ಎಸ್ಪಿ ತಪಸಿ ಗ್ರಾಮಕ್ಕೆ ಖುದ್ದಾಗಿ ಭೇಟಿ ನೀಡಿ ಘಟನೆ ಬಗ್ಗೆ ತನಿಖೆ ನಡೆಸಿದ್ದಾರೆ. ಗ್ರಾಮಸ್ಥರೂ ಸಹ ಈ ಘಟನೆ ಖಂಡಿಸಿದ್ದಾರೆ. ಅಲ್ಲದೇ ರೇಣುಕಾ ನಾಯಿಕ ಮಾಡಿದ ಆರೋಪ ಶುದ್ಧ ಸುಳ್ಳು ಎಂದು ಎಸ್ಪಿ ಕೂಡ ಹೇಳಿದ್ದಾರೆ ಎಂದು ಶಾಸಕರು ತಿಳಿಸಿದರು.
ಯಾರೇ ಅನ್ಯಾಯಕ್ಕೊಳಗಾಗಿದ್ದರೂ ಅವರಿಗೆ ನ್ಯಾಯ ದೊರಕಿಸಿಕೊಡುತ್ತೇನೆ. ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ ವಿವಾದ ಸೃಷ್ಟಿಸಿದ ನಾಯಿಕ ದಂಪತಿಗೂ ಕೂಡ ರಕ್ಷಣೆ ನೀಡಲು ಸಿದ್ಧನಿದ್ದೇನೆ. ಅವರಿಗೆ ತಪಸಿ ಗ್ರಾಮದಿಂದ ಬಹಿಷ್ಕಾರ ಹಾಕಿಲ್ಲ. ಅವರೇ ಪಲಾಯನ ಮಾಡಿದ್ದಾರೆ. ಈ ಘಟನೆಯಲ್ಲಿ ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ತಮ್ಮ ಬೆಂಬಲಿಗರು ಸಹ ಅವರಿಗೆ ಯಾವುದೇ ರೀತಿಯ ಬೆದರಿಕೆ ಹಾಕಿಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement