ಇಂದು ದೀಪದಾನ
ಹುಬ್ಬಳ್ಳಿ: ಕೆಎಲ್ಇ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೆ. 24ರಂದು ಸಂಜೆ 4ಕ್ಕೆ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ದೀಪದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ದೇವಾನಂದ ಗಾಂವಕರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಡಾ. ಎಸ್.ಎಸ್. ದೇಸಾಯಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಧಾರ್ಮಿಕ ಪದ್ಧತಿ ಆಚರಣೆ ಕಾರ್ಯಕರ್ತರ ಸಮಾವೇಶ
ಕಲಘಟಗಿ: ಭ್ರಷ್ಟಾಚಾರ ವಿರೋಧಿ ಆಂದೋಲನ ಸಂಘಟನೆಯಿಂದ ದಿ. 24ರಂದು ಧಾರ್ಮಿಕ ಆಚರಣೆಯ ಗೊರವಪ್ಪ, ಗೊರವಮ್ಮ, ಜೋಗಮ್ಮಪ್ಪ, ದಾಸಯ್ಯ ಇನ್ನಿತರೆ ಕಾರ್ಯಕರ್ತರ ಸಮಾವೇಶ ಸ್ಥಳೀಯ ಹನ್ನೆರಡು ಮಠದ ಆವರಣದಲ್ಲಿ ಜರುಗಲಿದೆ. ಅಂದು ಮಧ್ಯಾಹ್ನ 12 ಗಂಟೆಗೆ ಜರುಗಲಿರುವ ಈ ಸಮಾವೇಶವನ್ನು ಸಚಿವ ಸಂತೋಷಲಾಡ್ ಉದ್ಘಾಟಿಸುವರು. ಹನ್ನೆರಡುಮಠದ ಶ್ರೀ ರೇವಣಸಿದ್ದ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಸಂಘಟನೆಯ ರಾಜ್ಯಧ್ಯಕ್ಷ ಹನುಮಂತಪ್ಪ, ಡಿ.ಆರ್. ಲಿಂಗರಾಜ, ಲಕ್ಷ್ಮಣ ಎಂ., ಮಾರೆಮ್ಮ ಅಳಕೇರಿ, ಶಿವಪುತ್ರಪ್ಪ ಆಲದಕಟ್ಟಿ, ಚನ್ನಪ್ಪ ಬೇಗೂರ, ದೇವೇಂದ್ರಪ್ಪ ಬಡಿಗೇರ, ಶೇಖಯ್ಯ ಪೂಜಾರ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ಅಪರಿಚಿತ ಮಹಿಳೆ ಸಾವು
ಹುಬ್ಬಳ್ಳಿ: ತಾಲೂಕಿನ ಛಬ್ಬಿ ಕ್ರಾಸ್ ಬಳಿ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಅಪರಿಚಿತ ಮಹಿಳೆಯೊಬ್ಬಳು ಮೃತಪಟ್ಟಿದ್ದಾಳೆ. ಅಂದಾಜು 40-45 ವಯಸ್ಸಿನ ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ನೀಲಿ ಸೀರೆಯುಟ್ಟಿರುವ ಮೃತ ಮಹಿಳೆಯ ಶವ ಕಿಮ್ಸ್ ಶವಾಗಾರದಲ್ಲಿ ಇರಿಸಲಾಗಿದೆ. ವಾರಸುದಾರರು ಯಾರಾದರೂ ಇದ್ದಲ್ಲಿ ಗ್ರಾಮೀಣ ಠಾಣೆ 0836-2233214 ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಎಟಿಎಂ ಕಳ್ಳತನಕ್ಕೆ ಯತ್ನ
ಹುಬ್ಬಳ್ಳಿ: ಹೊಸ ಬಸ್ ನಿಲ್ದಾಣದ ಎದುರಿಗೆ ಇರುವ ಎರಡು ಬ್ಯಾಂಕ್ಗಳ ಎಟಿಎಂ ಕೇಂದ್ರಗಳನ್ನು ದೋಚುವುದಕ್ಕೆ ಕಳ್ಳರು ಪ್ರಯತ್ನಿಸಿದ್ದಾರೆ. ಕೆನರಾ ಬ್ಯಾಂಕ್ ಮತ್ತು ಆ್ಯಕ್ಸಿಸ್ ಬ್ಯಾಂಕ್ನ ಎಟಿಎಂ ಕೇಂದ್ರಗಳನ್ನು ದೋಚುವುದಕ್ಕೆ ಕಳ್ಳರು ಯತ್ನಿಸಿದ್ದಾರೆ. ಆ್ಯಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಅಳವಡಿಸಿದ್ದ ಕ್ಯಾಮೆರಾವನ್ನು ಕಳ್ಳರು ಕಿತ್ತೆಸೆದು ಅಲ್ಲಿನ ಗಾಜುಗಳನ್ನು ಒಡೆದು ಹಾಕಿದ್ದಾರೆ. ಅದೇ ರೀತಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರ ಯಂತ್ರದ ಪ್ಯಾನೆಲ್ ಕಿತ್ತು ಎಸೆದಿದ್ದಾರೆ. ಸೋಮವಾರ ರಾತ್ರಿ ವೇಳೆ ಎಟಿಎಂಗಳನ್ನು ಕಳ್ಳತನಕ್ಕೆ ಯತ್ನಿಸಿದ್ದ ಕಳ್ಳರು ಗಸ್ತಿನಲ್ಲಿದ್ದ ಪೊಲೀಸರನ್ನು ನೋಡಿ ಅಲ್ಲಿಂದ ಕಾಲ್ಕಿತ್ತಿರಬಹುದು ಎಂದು ಊಹಿಸಲಾಗಿದೆ. ಸುದ್ದಿ ತಿಳಿದ ನಂತರ ಘಟನಾ ಸ್ಥಳಕ್ಕೆ ಗೋಕುಲ್ ಪೊಲೀಸ್ ಠಾಣೆ ಪಿಎಸ್ಐ ಕೆ.ಸಿ. ಅಸುಂಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.