ಇಂಡಸ್ಟ್ರಿಯಲ್ ಕಾರಿಡಾರ್ ಬಂಡವಾಳ ಹೂಡಿಕೆಗೆ ಚಿಂತನೆ
ಹುಬ್ಬಳ್ಳಿ: ಮುಂಬೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣಕ್ಕೆ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಬ್ರಿಟಿಷ್ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಗ್ರೇಟ್ ಬ್ರಿಟನ್ ಡೆಪ್ಯೂಟಿ ಹೈಕಮೀಷನರ್ ಇಯಾನ್ ಫೆಲ್ಟಾನ್ ಹೇಳಿದರು.
ಎರಡೂ ರಾಷ್ಟ್ರಗಳ ನಡುವಿನ ದಿಪಕ್ಷೀಯ ಸಹಕಾರ ಮತ್ತು ವ್ಯವಹಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಯೋಜನೆ ಪ್ರಮುಖವಾಗಿದ್ದು, ಖಾಸಗಿ ಕ್ಷೇತ್ರದ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗುವ ಈ ಯೋಜನೆಯಲ್ಲಿ ಬಂಡವಾಳ ಹೂಡಿಕೆ ಸಾಧ್ಯಾಸಾಧ್ಯತೆ ಬಗ್ಗೆ ಬ್ರಿಟಿಷ್ ಸರ್ಕಾರ ವಿಚಾರ ಮಾಡುತ್ತಿದೆ ಎಂದರು.
ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಭಾರತದ ಪ್ರಧಾನಿ ಮನ್ಮೋಹನ್ ಸಿಂಗ್ ಮತ್ತು ಬ್ರಿಟಿಷ್ ಪ್ರಧಾನಿ ಡೆವಿಡ್ ಕ್ಯಾಮರೂನ್ ನಡುವೆ ಮಾತುಕತೆ ನಡೆದಿದೆ. ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ಮಧ್ಯೆ ಯೋಜನೆಯ ಸಾಧ್ಯಾಸಾಧ್ಯತೆ ಬಗ್ಗೆ ಚಿಂತನೆ ನಡೆದಿದೆ ಎಂದರು.