10ರಿಂದ ತರಬೇತಿ
ಧಾರವಾಡ: ಇಲ್ಲಿಯ ಕರ್ನಾಟಕ ಕಂಪ್ಯೂಟರ್ ತರಬೇತಿ ಸಂಸ್ಥೆಯ ವತಿಯಿಂದ ಏ.10 ರಿಂದ 40 ದಿನಗಳ ಕಾಲ ಉಚಿತ ಸ್ಪೋಕನ್ ಇಂಗ್ಲೀಷ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ವಯಸ್ಸಿನ ನಿರ್ಬಂಧವಿಲ್ಲ. ಆಸಕ್ತರು ಕರ್ನಾಟಕ ಕಂಪ್ಯೂಟರ್ ಆಕಾಡೆಮಿ, ಅಕ್ಕಿಪೇಟೆ, ಸಿಬಿಟಿ ಹತ್ತಿರ, 98861 62446 ಗೆ ಸಂಪರ್ಕಿಸಿ.
ಕಾಂಗ್ರೆಸ್ಗೆ ಬೆಂಬಲ
ಧಾರವಾಡ: ಇಲ್ಲಿಯ ಕರ್ನಾಟಕ ಪ್ರದೇಶ ರಾಕೇಶ್ ಸಿದ್ದರಾಮಯ್ಯ ಅಭಿಮಾನಿಗಳ ಒಕ್ಕೂಟವು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ. ವೇದಿಕೆ ಕಾರ್ಯಕರ್ತರು ಕುಲಕರ್ಣಿ ಮನೆಗೆ ತೆರಳಿ, ಶಿವಲೀಲಾ ವಿನಯ ಕುಲಕರ್ಣಿಯವರಿಗೆ ಹೂಗುಚ್ಛ ನೀಡುವ ಮೂಲಕ ಪ್ರಚಾರ ಕಾರ್ಯ ಕೈಗೊಂಡರು. ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಪ್ಪ ರಾಜಾಪುರ, ನಿರ್ಮಲಾ ಹೊಂಗಲ, ಬಸವರಾಜ ರಾಜಾಪೂರ, ಕಮಲಮ್ಮ ವಗ್ಗರ, ನಾರಾಯಣಸಾ ಲದ್ವಾ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.