ಮುತಾಲಿಕ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ
ಹುಬ್ಬಳ್ಳಿ: ಮುಸ್ಲಿಂ ಸಮುದಾಯದವರ ವಿರುದ್ಧ ಪ್ರಚೋದನಾಕಾರಿ ಹೇಳಿ ನೀಡಿರುವ ಧಾರವಾಡ ಲೋಕಸಭೆ ಪಕ್ಷೇತರ ಅಭ್ಯರ್ಥಿ ಪ್ರಮೋದ ಮುತಾಲಿಕ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ-ಧಾರವಾಡ ರಹವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮನವಿ ಅರ್ಪಿಸಲಾಯಿತು. ಈ ಕುರಿತಂತೆ ಸಂಘದ ಪದಾಧಿಕಾರಿಗಳು ಬುಧವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದು ಅಲ್ಲದೇ ಆ ಘಟನೆಗೆ ಪ್ರತ್ಯಕ್ಷ ಸಾಕ್ಷಿಯಾಗಿ ಸ್ವಯಂ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಇನ್ನೂ ಅನೇಕ ಮಸೀದಿಗಳನ್ನು ಕೆಡುವುಬೇಕಾಗಿದೆ ಎಂದೂ ಹೇಳಿದ್ದು ಚುನಾವಣಾ ನೀತಿ ಸಂಹಿತೆ ಸ್ವಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದ್ದಾರೆ. ಆದ್ದರಿಂದ ಮುತಾಲಿಕ್ ವಿರುದ್ಧ ತಕ್ಷಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳಲು ಚುನಾವಣಾಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿ ಮನವಿಯನ್ನು ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ದಾದಾಪೀರ ಬೇಪಾರಿ, ಕೆಪಿಸಿಸಿ ಸದಸ್ಯ ರಾಜಶೇಖರ ಮೆಣಸಿನಕಾಯಿ, ಬಾಬಾಜಾನ ಮುಧೋಳ, ಎಂ.ಎ. ಪಠಾಣ, ಇಲಿಯಾಸ್ ಮನಿಯಾರ್, ನಿಜಾಮುದ್ದೀನ ಹದ್ಲಿ, ಇಕ್ಬಾಲ್ ಬ್ಯಾಳಿ, ಮೈನುದ್ದೀನ ಮುಛಾಲೆ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿದ್ದರು.