ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಓಲೈಕೆ ಬಿಟ್ಟು ಕೆಲಸ ಮಾಡಿ

Mainashree
Updated On : 11 Apr 2014, 10:35 am

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಏ. 10
ಕಾರ್ಯಕರ್ತರು ಮುಖಂಡರ ಓಲೈಕೆಗೆ ಪ್ರಯತ್ನಿಸುವ ಬದಲು ಜನಪರ ಕೆಲಸ ಮಾಡುವ ಮೂಲಕ ತಾವೇ ಜನನಾಯಕರಾಗಲು ಪ್ರಯತ್ನಿಸಬೇಕು ಎಂದು ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ಮುಖಂಡರಾದ ರಾಣಿ ಸತೀಶ ಸಲಹೆ ನೀಡಿದರು.
ಧಾರವಾಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಪರ ಪ್ರಚಾರಕ್ಕಾಗಿ ನಗರಕ್ಕೆ ಗುರುವಾರ ಆಗಮಿಸಿದ್ದ ಮಾಜಿ ಸಚಿವೆ ರಾಣಿ ಸತೀಶ, ಪ್ರಚಾರಕ್ಕೆ ಮುನ್ನ ಏರ್ಪಡಿಸಿದ್ದ ಮಹಿಳಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಬಡ ಮಹಿಳೆಯರ, ವಿಧವೆಯರ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ಮಹಿಳಾ ಕಾರ್ಯಕರ್ತರು ರೂಢಿಸಿಕೊಳ್ಳಬೇಕು. ಕಾರ್ಯಕರ್ತರು ಯಾವುದೇ ಫಲ ನಿರೀಕ್ಷಿಸದೇ ಜನಸಾಮಾನ್ಯರಿಗೆ ಸಹಾಯ ಮಾಡಬೇಕು. ಅಂದಾಗ ಮಾತ್ರ ಭವಿಷ್ಯದಲ್ಲಿ ಕಾರ್ಯಕರ್ತರು ಜನನಾಯಕರಾಗಿ ಗುರುತಿಸಿಕೊಳ್ಳುತ್ತಾರೆ. ಆಗ ರಾಜಕೀಯ ಪಕ್ಷಗಳಲ್ಲಿಯೂ ಅಂಥ ಕಾರ್ಯಕರ್ತರಿಗೆ ಉತ್ತಮ ಅವಕಾಶಗಳು ಒದಗಿಬರುತ್ತವೆ ಎಂದರು.
ಅಭ್ಯರ್ಥಿ ವಿನಯ ಕುಲಕರ್ಣಿ ಅವರ ಧರ್ಮಪತ್ನಿ ಶಿವಲೀಲಾ ಕುಲಕರ್ಣಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ನೀಡುವಂತೆ ಕಾರ್ಯಕರ್ತರು ಮತದಾರರ ಮನವೊಲಿಸಲು ಪ್ರಯತ್ನಿಸಬೇಕು. ಯುಪಿಎ ಸರ್ಕಾರದ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಮಾಜಿ ಮೇಯರ್ ಅನಿಲ ಪಾಟೀಲ ಮಾತನಾಡಿದರು. ಮಹಿಳಾ ಕಾಂಗ್ರೆಸ್‌ನ ಜಿ. ದೇವಕಿ, ರಾಜೇಶ್ವರಿ ಮಾಳವಿ, ರಜಿಯಾಬೇಗಂ ಸಂಗೊಳ್ಳಿ ಉಪಸ್ಥಿತರಿದ್ದರು. ನಂತರ ವಿವಿಧ ಪ್ರದೇಶಗಳಲ್ಲಿ ಸಂಚರಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement