ದೇಶದ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ನೀಡಿ
ಕಲಘಟಗಿ: ಅಭಿವೃದ್ಧಿಯ ಮುಖಾಂತರ ದೇಶದಲ್ಲಿ ಬದಲಾವಣೆ ತರುವ ಜೊತೆಗೆ ಭಾರತದ ಭವಿಷ್ಯ ರೂಪಿಸುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸುವುದಕ್ಕಾಗಿ ಬಿಜೆಪಿ ಮತ ನೀಡಿ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಹೇಳಿದರು.
ತಾಲೂಕಿನ ಬಮ್ಮಿಗಟ್ಟಿ ಗ್ರಾಮದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಮಾತನಾಡಿದರು. ಈ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ಅಲೆಯೆದ್ದಿದ್ದು ಅದರಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಲಿದೆ ಎಂದರು.
ಪಾದಯಾತ್ರೆಯಲ್ಲಿ ಕ್ರೆಡಲ್ ಮಾಜಿ ಅಧ್ಯಕ್ಷ ಸಿ.ಎಂ. ನಿಂಬಣ್ಣವರ, ಜಿಪಂ ಅಧ್ಯಕ್ಷ ಶಂಕ್ರಣ್ಣ ಅಗಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಗೀತಾ ಮರಲಿಂಗಣ್ಣವರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಜಿಪಂ ಮಾಜಿ ಸದಸ್ಯ ಐ.ಸಿ. ಗೋಕುಲ, ನಾಗಪ್ಪ ಡೊಣ್ಣಿ, ವಿರೂಪಾಕ್ಷ ನೂಲ್ವಿ, ರುದ್ರಯ್ಯ ಚಿಕ್ಕಮಠ, ಬಸಪ್ಪ ಕವಳಿ, ಬಸನಗೌಡ ಪಾಟೀಲ, ನಿಂಗಪ್ಪ ಛಬ್ಬಿ, ಶಿವಪ್ಪ ಡೊಣ್ಣಿ ಮುಂತಾದವರು ಉಪಸ್ಥಿತರಿದ್ದರು.