ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಕಾರ್ಯಕರ್ತರ ಚದುರಿಸಲು ಲಾಠಿ ಪ್ರಹಾರ

Srinivasa Murthy VN
Updated On : 18 Apr 2014, 12:23 pm

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಕಾರವಾರ ರಸ್ತೆಯ ಸಿದ್ಧಾರೂಢ ಹೈಸ್ಕೂಲ್ ಮತಗಟ್ಟೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ.
ಮತಗಟ್ಟೆ ಸಂಖ್ಯೆ 129 ಹಾಗೂ 130ರಲ್ಲಿ ಮತದಾನಕ್ಕೆ ಸರದಿಯಲ್ಲಿ ನಿಂತಿದ್ದ ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ವಾದದಲ್ಲಿ ತೊಡಗಿದ್ದಾಗೆ ಹಳೇ ಹುಬ್ಬಳ್ಳಿ ಠಾಣೆ ಎಸ್‌ಐ ರಾಠೋಡ ಎಂಬುವವರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದರೆಂಬುದು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಆರೋಪ. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸಿದ್ಧಾರೂಢ ಹೈಸ್ಕೂಲಿಗೆ ದೌಡಾಯಿಸಿದ ಮಾಜಿ ಶಾಸಕರಾದ ವೀರಭದ್ರಪ್ಪ ಹಾಲಹರವಿ ಹಾಗೂ ಅಶೋಕ ಕಾಟವೆ ಕೆಲ ಸಮಯ ಧರಣಿ ಕುಳಿತರು. ಹಿರಿಯ ಪೊಲೀಸ್ ಅಧಿಕಾರಿಗಳು ಧರಣಿ ಕೈಬಿಡುವಂತೆ ಬಿಜೆಪಿ ಮುಖಂಡರ ಮನವೊಲಿಸಿದರು ಎಂದು ಹೇಳಲಾಗಿದೆ.
ಆದರೆ ಸಹಾಯ ಪೊಲೀಸ್ ಆಯುಕ್ತ ಎನ್.ಡಿ. ಬಿರ್ಜೆ ಮತ್ತು ಹಳೇ ಹುಬ್ಬಳ್ಳಿ ಠಾಣೆ ಇನ್‌ಸ್ಪೆಕ್ಟರ್ ಶಿವಾನಂದ ಚಲವಾದಿ, ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಗುಂಪಾಗಿ ನಿಂತಿದ್ದ ಜನರನ್ನು ತಮ್ಮ ಸಿಬ್ಬಂದಿ ಚದುರಿಸಿದ್ದಾರೆ. ಲಾಠಿ ಪ್ರಹಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement