ಧಾರವಾಡ: ಅತ್ಯಾಚಾರಕ್ಕೆ ಯತ್ನ
ಧಾರವಾಡ: ವ್ಯಕ್ತಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿದ ಘಟನೆ ಇಲ್ಲಿನ ಮಾಳಾಪುರ ಜನತಾ ಪ್ಲಾಟ್ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ನಾರಾಯಣ ಮಹಾದೇವ ಚವ್ಹಾಣ ಎಂಬುವನೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಜನತಾ ಪ್ಲಾಟ್ನ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಪತಿ ಕೆಲಸದ ನಿಮಿತ್ತ ಪರಸ್ಥಳಕ್ಕೆ ಹೋದ ಸಂದರ್ಭದಲ್ಲಿ ನಾರಾಯಣ, ಅತ್ಯಾಚಾರಕ್ಕೆ ಯತ್ನಿಸಿದ್ದಾನಲ್ಲದೆ, ತನ್ನೊಂದಿಗೆ ಸಹಕರಿಸದಿದ್ದಲ್ಲಿ ಮೈ ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆಯನ್ನೂ ಒಡ್ಡಿದ್ದ ಎಂದು ಠಾಣೆಯಲ್ಲಿ ನೀಡಲಾಗಿರುವ ದೂರಿನಲ್ಲಿ ತಿಳಿಸಲಾಗಿದೆ. ಆರೋಪಿ ಮಹಿಳೆಯ ದೂರದ ಸಂಬಂಧಿಯೂ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತಂತೆ ಪ್ರಕರಣ ದಾಖಲಾಗಿದೆ.