ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಕೃಷಿ ಇಲಾಖೆ ಮಾಹಿತಿ ಎಲ್ಲರಿಗೂ ಸಿಗಲಿ: ಅಗಡಿ

Srinivasa Murthy VN
Updated On : 5 Feb 2014, 12:19 pm

ಕಲಘಟಗಿ: ಕೃಷಿ ಇಲಾಖೆಯ ಸೇವಾ ಸೌಲಭ್ಯಗಳ ಮಾಹಿತಿ ಪ್ರತಿಯೊಬ್ಬ ರೈತರಿಗೂ ತಲುಪುತ್ತಿಲ್ಲ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶಂಕ್ರಣ್ಣ ಅಗಡಿ ವಿಷಾದ ವ್ಯಕ್ತಪಡಿಸಿದರು.
ಇಲ್ಲಿನ ಎಪಿಎಂಸಿ ಆವರಣದಲ್ಲಿ ಕೃಷಿ ಇಲಾಖೆ ಸೋಮವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಕೃಷಿ ಮಾಹಿತಿ ಆಂದೋಲ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗದೇ ರೈತರು ಕಂಗಾಲಾಗುತ್ತಿದ್ದಾರೆ. ಮಧ್ಯವರ್ತಿಗಳ ಹಾವಳಿಯೂ ಹೆಚ್ಚಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ಅಗಡಿ, ಇಂತಹ ಕೃಷಿ ಆಂದೋಲನಗಳನ್ನು ಹೆಚ್ಚೆಚ್ಚು ಹಮ್ಮಿಕೊಳ್ಳುವ ಮೂಲಕ ರೈತರಿಗೆ ಸೂಕ್ತ ಮಾಹಿತಿ ನೀಡಬೇಕೆಂದರು. ರೈತ ಧುರೀಣ ನಿಜಗುಣಿ ಕೆಲಗೇರಿ, ರೈತರು ಸಂಘಟಿತರಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಪ್ರಯತ್ನಿಸಬೇಕು  ಎಂದರು. ತಾಪಂ ಅಧ್ಯಕ್ಷ ಎಂ.ಎಫ್. ಜಾವೂರ, ಕೃಷಿ ಆಂದೋಲನ ಕಾರ್ಯಕ್ರಮಗಳಲ್ಲಿ ರಾಜಕೀಯ ಬೆರೆಯದಂತೆ ಎಚ್ಚರಿಕೆವಹಿಸಬೇಕು, ಅಂದಾಗ ರೈತೋಪಯೋಗಿ ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ರೈತ ಮುಖಂಡರಾದ ಬಿ.ಸಿ. ಪಾಟೀಲ, ಎಸ್.ಆರ್. ಪಾಟೀಲ, ಎಪಿಎಂಸಿ ಅಧ್ಯಕ್ಷ ವಿ.ವಿ. ಹೊಸಮನಿ ಮಾತನಾಡಿದರು. ಶಾಸಕ ಸಂತೋಷ ಲಾಡ್ ಅವರ ಆಪ್ತ ಕಾರ್ಯದರ್ಶಿ    ಸೋಮಶೇಖರ ಬೆನ್ನೂರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಾಲಾ ಗೋಕುಲ,  ಡಾ. ಎಂ.ಎಸ್. ತಡಸ, ವಿ.ಬಿ. ಶಿವನಗೌಡ್ರ, ಶೇಖಪ್ಪ ಹುಲಗೂರ, ಬಸವಣ್ಣಯ್ಯ ಹಿರೇಮಠ, ಯಲ್ಲಾರಿ ಇದ್ದರು. ಇದೇ ಸಂದರ್ಭದಲ್ಲಿ ತೋಟಗಾರಿಕೆ,  ಅರಣ್ಯ, ಜಲಾನಯನ, ಮೀನುಗಾರಿಕೆ ಇಲಾಖೆ ವತಿಯಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement