ಯುವ ಕಾಂಗ್ರೆಸ್ನಿಂದ ಸಹಾಯಹಸ್ತ
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದಿಂದ ಕುಂದಗೋಳದ ಶಿವಾನಂದಮಠ ಪ್ರಾಥಮಿಕ ಶಾಲೆಯಲ್ಲಿ ಸಹಾಯ ಹಸ್ತ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಧಾರವಾಡ ಲೋಕಸಭಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಷ್ಪಾಕ್ ಕುಮಟಾಕರ್, ಕೇಂದ್ರ ಸರ್ಕಾರ ಜಾರಿ ಮಾಡಿರುವ ಕಡ್ಡಾಯ ಮತ್ತು ಉಚಿತ ಶಿಕ್ಷಣ ಕಾಯ್ದೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಹೇಳಿದರು. ಕಡ್ಡಾಯ ಶಿಕ್ಷಣದಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯುವುದಕ್ಕೆ ಫೆ. 8 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಯುವ ಕಾಂಗ್ರೆಸ್ ಸಹಾಯವಾಣಿ 9738742777ನ್ನು ಸಂಪರ್ಕಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಅಪ್ಪಣ್ಣ ಹಿರೇಗೌಡ್ರ, ಉಮೇಶ ಹೆಬ್ಸೂರ್, ಕುಂದಗೋಳ ವಿಧಾನಸಭಾ ಕಾಂಗ್ರೆಸ್ ಅಧ್ಯಕ್ಷ ಚಾಂದ್ಪೀರ್ ಬಂಕಾಪುರ, ಪ್ರಧಾನ ಕಾರ್ಯದರ್ಶಿ ಗಿರೀಶ ಮುದಿಗೌಡ್ರ ಸೇರಿದಂತೆ ಇನ್ನಿತರರು ಇದ್ದರು.