ಪ್ರವೇಶಕ್ಕೆ ಅರ್ಜಿ ಆಹ್ವಾನ
ಧಾರವಾಡ: ಪ್ರಸಕ್ತ ಸಾಲಿನಲ್ಲಿ 7ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಸಂಗೊಳ್ಳಿ ರಾಯಣ್ಣ ಸ್ಮಾರಕ ಇಂಗ್ಲಿಷ್ ಮಾಧ್ಯಮ ಶಾಲೆ ನಂದಗಡ ಇದರ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಹಾಗೂ ಶಿಕ್ಷಣ ನೀಡಲಾಗುವುದು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಯನ್ನು ತಾಲೂಕು ಸಾಮಾಜಿಕ ಕಲ್ಯಾಣ ಅಧಿಕಾರಿಗಳಿಂದ ಪಡೆದು ತುಂಬಿದ ಅರ್ಜಿಗಳನ್ನು ಮಾರ್ಚ್ 3ರೊಳಗೆ ಶಾಲೆ ವಿಳಾಸಕ್ಕೆ ನೇರವಾಗಿ ಕಳುಹಿಸಲು ತಿಳಿಸಲಾಗಿದೆ.
ನಾಳೆ ಉಪನ್ಯಾಸ
ಧಾರವಾಡ: ಇಲ್ಲಿಯ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಫೆ.13 ರಂದು ಸಂಜೆ 6 ಕ್ಕೆ ಉತ್ತಾರಾಧಿಮಠ ದತ್ತಿ ಕಾರ್ಯಕ್ರಮದಲ್ಲಿ ದಾಸ ವೈಭವದ ಕುರಿತು ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಜೆಎಸ್ಸೆಸ್ ಕಾಲೇಜಿನ ಪ್ರಾಧ್ಯಾಪಕ ವೆಂಕಟನರಸಿಂಹಾಚಾರ್ಯ ಜೋಶಿ ಉಪನ್ಯಾಸ ನೀಡಲಿದ್ದಾರೆ. ಅತಿಥಿಗಳಾಗಿ ಡಾ.ಅಶೋಕ ಚಚಡಿ, ವೆಂಕಟೇಶ ಜೋಶಿ, ಎಸ್.ಬಿ.ಗುತ್ತಲ ಆಗಮಿಸಲಿದ್ದು, ಡಾ.ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ನಾಳೆ ಕಾರ್ಯಾಗಾರ
ಧಾರವಾಡ: ಬಾಲನ್ಯಾಯ ಕಾಯ್ದೆ ಪರಿಣಾಮಕಾರಿ ಅನುಷ್ಠಾನದಲ್ಲಿ ಮಾಧ್ಯಮ ಪಾತ್ರ ಕುರಿತ ಕಾರ್ಯಾಗಾರ ಫೆ. 13ರಂದು ಬಳಗ್ಗೆ 11ಕ್ಕೆ ಧಾರವಾಡದ ಹೋಟೆಲ್ ಮಂದಾರದಲ್ಲಿ ನಡೆಯಲಿದೆ. ಅಪರ ಜಿಲ್ಲಾಧಿಕಾರಿ ಶಿವಾನಂದ ಕಾಪಸೆ ಉದ್ಘಾಟಿಸುವರು. ನಿವೃತ್ತ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಶೇಖರಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು. ಸಹಾಯಕ ಪೊಲೀಸ್ ಆಯುಕ್ತ ಎಚ್.ಎಸ್. ಕೇರಿ, ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಸಿ.ಯು. ಬೆಳ್ಳಕ್ಕಿ ಹಾಗೂ ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿ.ಪಿ. ಮಾಯಾಚಾರಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.