ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಬ್ಯಾಂಕ್ ಮುಷ್ಕರ ಯಶಸ್ವಿ

Mainashree
Updated On : 12 Feb 2014, 1:43 am

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಫೆ. 11
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಸಂಘಟನೆಗಳು ಕರೆ ನೀಡಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಸಾರ್ವಜನಿಕರು ತೊಂದರೆ ಅನುಭವಿಸಿದರು.
ಎರಡು ದಿನಗಳ ಬ್ಯಾಂಕ್ ಬಂದ್ಗೆ ಬ್ಯಾಂಕ್ ನೌಕರರ ಸಂಘಟನೆಗಳು ಕರೆ ನೀಡಿದ್ದು, ಹೆಚ್ಚಿನ ನಾಗರಿಕರು ಮುಷ್ಕರದ ಮೊದಲ ದಿನವಾದ ಸೋಮವಾರ ಎಟಿಎಂಗಳಿಂದ ಸಾಕಷ್ಟು ಹಣ ಪಡೆದಿದ್ದರಿಂದ 2ನೇ ದಿನದ ಮುಷ್ಕರದ ಅವಧಿಯಲ್ಲಿ ಹೆಚ್ಚಿನ ಎಟಿಎಂಗಳಲ್ಲಿ ಹಣ ಖಾಲಿಯಾಗಿತ್ತು.
ಹಣಕ್ಕಾಗಿ ಸಾರ್ವಜನಿಕರು ವಿವಿಧ ಎಟಿಎಂಗಳಿಗೆ ಪರದಾಡುತ್ತಿದ್ದ ದೃಶ್ಯ ಕೆಲವೆಡೆ ಕಂಡುಬಂದಿತು. ಮುಷ್ಕರದ ಹಿನ್ನೆಲೆಯಲ್ಲಿ ಬ್ಯಾಂಕ್ ವತಿಯಿಂದ ಸಾಕಷ್ಟು ಹಣ ಎಟಿಎಂಗಳಿಗೆ ಹಾಕಲಾಗಿತ್ತಾದರೂ ಮುನ್ನಚ್ಚರಿಕೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೋಮವಾರ ಹೆಚ್ಚಿನ ಹಣ ಪಡೆದಿದ್ದರು. ಕಳೆದ ಎರಡು ದಿನಗಳಿಂದ ಬ್ಯಾಂಕ್ ಬಂದ್ ಇದ್ದಿದ್ದರಿಂದ ವಾಣಿಜ್ಯ ವ್ಯವಹಾರಗಳ ಹೆಚ್ಚಿನ ಆರ್ಥಿಕ ವಹಿವಾಟು ನಡೆಯಲಿಲ್ಲ.
ಈ ಮಧ್ಯೆ ಮುಷ್ಕರದ ಎರಡನೇ ದಿನವಾದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಬ್ಯಾಂಕ್ ಸಿಬ್ಬಂದಿ, ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement