ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಮಕ್ಕಳಿಗೆ ಉತ್ತಮ ಸಂಸ್ಕಾರ ಅವಶ್ಯ: ಶ್ರೀ

Vishwanath S
Updated On : 24 Feb 2014, 11:09 am

ಅಣ್ಣಿಗೇರಿ: ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕೆನ್ನುವ ಜವಾಬ್ದಾರಿ ಇಂದು ನಾವೆಲ್ಲರೂ ಮರೆತಿದ್ದೇವೆ ಎಂದು ಗದಗ-ಬಿಜಾಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.
ಇಲ್ಲಿನ ಬಾಪೂಜಿ ವಿದ್ಯಾನಿಕೇತನ ಶಾಲೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪಾಲಕರ ದಿನ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಮೌಲ್ಯಗಳ ಬಗ್ಗೆ ಮಕ್ಕಳಿಗೆ ತಿಳಿ ಹೇಳಿ ಅದರಂತೆ ನಡೆದುಕೊಳ್ಳುವಂತೆ ಪ್ರೇರೇಪಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.
ನರಗುಂದ ಪತ್ರಿವನ ಮಠದ ಶಿವಾನಂದ ಶಿವಾಚಾರ್ಯ ಶ್ರೀಗಳು, ಇಂದಿನ ಮಕ್ಕಳೇ ನಾಳಿನ ಭವಿಷ್ಯ. ಆದ್ದರಿಂದ ಪ್ರತಿಯೊಂದು ಮಗುವೂ ಧೈರ್ಯ, ಆತ್ಮವಿಶ್ವಾಸ, ಸದೃಢ ಮನಸ್ಸಿನಿಂದ ಸಾಧನೆಗೈಯಲು ಮುಂದಾಗುವಂತೆ ಪೂರಕ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದರು. ಶಾಲಾ ಚೇರ್ಮನ್ ಎ.ಡಿ. ಧಾರವಾಡ ಅಧ್ಯಕ್ಷತೆವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಹುಬ್ಬಳ್ಳಿಯ ಶ್ರೀನಿವಾಸ ಕಲಾ ಸಂಗಮ ಬಳದ ವಿದ್ಯಾರ್ಥಿಗಳು ನೃತ್ಯ ಹಾಗೂ ಸುಗಮ ಸಂಗೀತ ಪ್ರಸ್ತುತಪಡಿಸಿದರು. ಪ್ರಾಚಾರ್ಯ ಎನ್.ಡಿ. ಧಾರವಾಡ, ಡಾ. ಜಿ.ಎಂ. ಪಾಟೀಲ, ಮಹಮ್ಮದಗೌಸ ಅಕ್ಕಿ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement