ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಬೆಳೆಗೆ ಬೆಂಬಲ ಬೆಲೆ: ಶಿವಳ್ಳಿ

Vishwanath S
Updated On : 25 Feb 2014, 11:07 am

ಕುಂದಗೋಳ: ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಒದಗಿಸಲು ಸರ್ಕಾರ ಬದ್ಧವಾಗಿದ್ದು, ಈ ವರ್ಷ ಪ್ರತಿ ಕ್ವಿಂಟಲ್ ಕಡಲೆಯನ್ನು ರು. 3100ಕ್ಕೆ ಖರೀದಿಸುತ್ತಿದೆ ಎಂದು ಶಾಸಕ ಸಿ.ಎಸ್. ಶಿವಳ್ಳಿ ಹೇಳಿದರು.
ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಸೋಮವಾರ ಕಡಲೆಕಾಳು ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬೆಲೆಯಲ್ಲಿ ಕಡಲೆಯನ್ನು ಖರೀದಿಸಲು ಸರ್ಕಾರ ಮುಂದಾಗಿದೆ. ತಾಲೂಕಿನ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿದ್ದು ಯುವ ಕೃಷಿಕರ ಹೆಚ್ಚೆಚು ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಆರ್ಥಿಕ ಸಬಲತೆ ಸಾಧಿಸಬೇಕೆಂದರು.
ಈ ಭಾಗದಲ್ಲಿ ಬೆಳೆಯುವ ಮೆಣಸಿನಕಾಯಿ ಬೆಳೆಗೆ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವ ಪರಿಣಾಮ ರೈತರು ಅನಿವಾರ್ಯವಾಗಿ ಬ್ಯಾಡಗಿ ಮಾರುಕಟ್ಟೆಗೆ ತೆರಳಬೇಕಾಗಿದೆ. ಮುಂಬರುವ ದಿನಗಳಲ್ಲಿ ಇದೇ ಎಪಿಎಂಸಿಯಲ್ಲಿ ಖರೀದಿ ಕೇಂಧ್ರ ಆರಂಬಿಸಲಾಗುವುದೆಂದು ಶಾಸಕ ಶಿವಳ್ಳಿ ಹೇಳಿದರು.
ಎಪಿಎಂಸಿ ಅಧ್ಯಕ್ಷ ಸಿ.ವೈ. ಪಾಟೀಲ ಮಾತನಾಡಿ, ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವಂತೆ ಶಾಸಕ ಸಿ.ಎಸ್. ಶಿವಳ್ಳಿ ಅವರಲ್ಲಿ ಮನವಿ ಮಾಡಿಕೊಂಡರು.
ಎಪಿಎಂಸಿ ಸದಸ್ಯ ದಯಾನಂದ ಕುಂದೂರ, ಈವರೆಗೆ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ ಅಭಿವೃದ್ಧಿಗೊಂಡಿರಲಿಲ್ಲ. ಇದೀಗ ಕಟ್ಟಡಕ್ಕೆ ಹೊಸ ರೂಪ ಲಭಿಸಿದ್ದು ರೈತರು ಇದರ ಪ್ರಯೋಜನ ಪಡೆದುಕೊಂಡು ತಾವು ಬೆಳೆದಿರುವ ಬೆಳೆಗಳನ್ನು ಎಪಿಎಂಸಿ ಮಾರುಕಟ್ಟೆಯಲ್ಲೇ ಮಾರಾಟಕ್ಕೆ ಮುಂದಾಗಬೇಕೆಂದರು.
ಕಾಂಗ್ರೆಸ್ ಮುಖಂಡ ಅರವಿಂದ ಕಟಗಿ ಮಾತನಾಡಿದರು. ನಾಗನಗೌಡ ಪಾಟೀಲ, ವಿಶ್ವನಾಥ ಕುಬಿಹಾಳ, ನಾಗರಾಜ ಮೆಣಸಿನಕಾಯಿ, ಅಜ್ಜಪ್ಪ ಕುಡವಕ್ಕಲ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement