ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಭಾರತ ಗೆಲ್ಲಿಸಿ: ಸಿದ್ಧತೆ ಪರಿಶೀಲಿಸಿದ ಶೆಟ್ಟರ್

Vishwanath S
Updated On : 25 Feb 2014, 11:06 am

ಹುಬ್ಬಳ್ಳಿ: ನರೇಂದ್ರ ಮೋದಿಯವರ ಭಾರತ ಗೆಲ್ಲಿಸಿ ಅಭಿಯಾನ ನಡೆಯಲಿರುವ ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ್ಯವನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಸೋಮವಾರ ಪರಿಶೀಲಿಸಿದರು.
ಸಮಾರಂಭದ ವೇದಿಕೆ ಸೇರಿದಂತೆ ಸಿದ್ಧತೆಯ ಬಗ್ಗೆ ಮುಖಂಡದ್ವಯರು ಮಾಹಿತಿ ಪಡೆದುಕೊಂಡರಲ್ಲದೇ ಕೆಲ ಸಲಹೆ ಸೂಚನೆ ನೀಡಿದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ನರೇಂದ್ರ ಮೋದಿಯವರ ಭಾರತ ಗೆಲ್ಲಿಸಿ ಅಭಿಯಾನಕ್ಕೆ ಅಭೂತಪೂರ್ವ ಜನ ಬೆಂಬಲ ಸಿಗುತ್ತಿದೆ. ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೂ 3 ಲಕ್ಷಕ್ಕಿಂತ ಹೆಚ್ಚು ಜನ ಆಗಮಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದೆ. ಮನೆ ಮನೆಗೆ ಹೋಗಿ ಆಮಂತ್ರಣ ನೀಡಲಾಗುತ್ತಿದೆ. ಹುಬ್ಬಳ್ಳಿಯ ಮಟ್ಟಿಗೆ ಇದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು. ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಶಂಕರಪಾಟೀಲ ಮುನೇನಕೊಪ್ಪ, ಮಹೇಶ ಟೆಂಗಿನಕಾಯಿ, ರಂಗಾಬದ್ಧಿ, ಮಲ್ಲಿಕಾರ್ಜುನ ಸಾವಕಾರ, ವೆಂಕಟೇಶ ಮೇಸ್ತ್ರಿ, ನಾರಾಯಣ ಜರತಾರಘರ ಇದ್ದರು.
ಆಹ್ವಾನ
ಫೆ. 28ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ರ್ಯಾಲಿಗೆ ಆಗಮಿಸುವಂತೆ ಸೋಮವಾರ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮನೆ ಮನೆಗೆ ತೆರಳಿ ಬಿಜೆಪಿ ಕಾರ್ಯಕರ್ತರು ಆಹ್ವಾನ ನೀಡಿದರು. ಶಿವು ಮೆಣಸಿನಕಾಯಿ, ಮಹೇಶ ಟೆಂಗಿನಕಾಯಿ ಸೇರಿದಂತೆ ಇನ್ನಿತರರು ಇದ್ದರು.
ಬೈಕ್ ರ್ಯಾಲಿ
ಹುಬ್ಬಳ್ಳಿ ಕುಸುಗಲ್ ರಸ್ತೆ  ಮೈದಾನದಲ್ಲಿ ನಡೆಯಲಿರುವ ನರೇಂದ್ರ ಮೋದಿಯವರ ರ್ಯಾಲಿ ಹಿನ್ನೆಲೆಯಲ್ಲಿ ಸೋಮವಾರ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಬೈಕ್ ರ್ಯಾಲಿ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement