ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ಸಿಬಿಎಸ್‌ಇ ಶಾಲೆ

Lingaraj Badiger
Updated On : 6 Jan 2014, 12:39 pm

ಕನ್ನಡಪ್ರಭ ವಾರ್ತೆ, ಧಾರವಾಡ, ಜ. 5
ಅಂಜುಮನ್ ಇಸ್ಲಾಂ ಸಂಸ್ಥೆಯ ವತಿಯಿಂದ ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಸಿಬಿಎಸ್‌ಇ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸಲಾಗುವುದು ಎಂದು ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ಹೇಳಿದ್ದಾರೆ.
ಇಲ್ಲಿನ ಅಂಜುಮನ್ ಇಸ್ಲಾಂ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.
ಸಂಸ್ಥೆಯ ಹಳೆಯ ವಾಣಿಜ್ಯ ಸಂಕೀರ್ಣದ ಜಾಗದಲ್ಲಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಜೊತೆಗೆ ಕೆಸಿಸಿ ಬ್ಯಾಂಕ್ ಬಳಿಯ ಶಾಲಿಬಾನ್ ಮಕಾನ್‌ನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಸಂಸ್ಥೆಯ ಶಿಕ್ಷಣ ಸಂಸ್ಥೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿವೆ. ಕಳೆದ ವರ್ಷ ನರ್ಸರಿ ಆರಂಭಿಸಲಾಗಿದ್ದು, ಮುಂದಿನ ವರ್ಷ ಸಿಬಿಎಸ್‌ಇ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲಾಗುವುದು ಎಂದರು.
ಮುಸ್ಲಿಂ ಖಬರಸ್ಥಾನದಲ್ಲಿ ಸ್ವಚ್ಛತೆ, ಹೈಮಾಸ್ಟ್ ದೀಪ ಅಳವಡಿಕೆ, ಕುಡಿಯುವ ನೀರು ಪೂರೈಕೆ ಸೇರಿದಂತೆ ಅನೇಕ ಅಭಿವೃದ್ಧಿ ಕೈಗೊಳ್ಳಲಾಗಿದೆ. ಈದ್ಗಾ ಮೈದಾನದಲ್ಲಿಯೂ ಅವಶ್ಯಕ ಕಾರ್ಯಗಳನ್ನು ಮಾಡಲಾಗಿದೆ. ಅಲ್ಲದೇ ಮಂಗಳಗಟ್ಟಿ ಮಾವಿನ ತೋಪಿನಲ್ಲಿ 500 ಮಾವಿನ ಸಸಿ ನೆಡಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹಲವಾರು ಅಭಿವೃದ್ಧಿ ಮತ್ತು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲು ಉದ್ದೇಶವಿದ್ದು, ಸಮಾಜ ಬಾಂಧವರು ಆಡಳಿತ ಮಂಡಳಿಗೆ ಸಹಕರಿಸಬೇಕು ಎಂದರು.
ಕಿತ್ತೂರ ಅವರ ಕುರಾನ್ ಪಠಣದೊಂದಿಗೆ ಸಭೆ ಆರಂಭವಾಯಿತು. ಸಂಸ್ಥೆಯ ಗೌರವ ಕಾರ್ಯದರ್ಶಿ ಜಬ್ಬಾರ್ ನಿಪ್ಪಾಣಿ ವಾರ್ಷಿಕ ವರದಿ ಮಂಡಿಸಿದರು. ಉಪಾಧ್ಯಕ್ಷ ಖಲೀಲ್ ಅಹ್ಮದ್ ದಾಸನಕೊಪ್ಪ, ಆಡಳಿತ ಮಂಡಳಿ ಸದಸ್ಯರು, ಮೊಹಲ್ಲಾ ಮುತವಲ್ಲಿಗಳು ಇದ್ದರು. ಸಹ ಕಾರ್ಯದರ್ಶಿ ರಫೀಕಅಹ್ಮದ್ ಶಿರಹಟ್ಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement