ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Lingaraj Badiger
Updated On : 8 Jan 2014, 1:08 am

ಧಾರವಾಡ: ಪ್ರತಿಯೊಂದು ಸ್ಪರ್ಧೆಯಲ್ಲಿ ಸೋಲು-ಗೆಲವು ಸಾಮಾನ್ಯ. ಆದರೆ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಬಹುಮುಖ್ಯ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ಹೇಳಿದರು.
ಜಿಲ್ಲಾಡಳಿತ ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರ್ಕಾರಿ ನೌಕರರು ಒಂದಿಲ್ಲೊಂದು ಕೆಲಸದಲ್ಲಿ ತೊಡಗಿಕೊಂಡಿರುತ್ತಾರೆ. ಕಚೇರಿ ಅವಧಿ ನಂತರವೂ ಇಲಾಖೆ ಮತ್ತೊಂದು ಕೆಲಸದಲ್ಲಿ ನಿರತರಾಗಿರುತ್ತಾರೆ ಎಂದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಜಿ. ಬಾಲಣ್ಣವರ, ಪ್ರಸ್ತುತ ನಡೆದಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಮಹಿಳಾ ಶಿಕ್ಷಕರ ಭಾಗವಹಿಸುವಿಕೆ ಕಡಿಮೆಯಿದೆ. ಮಹಿಳಾ ಶಿಕ್ಷಕರು ಕೂಡಾ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದರು.
ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ, ಎಚ್.ಕೆ. ರಾಮದುರ್ಗ, ಎಸ್.ಎಚ್. ಸಿದ್ಧನಗೌಡರ, ಎಚ್.ಬಿ. ದಳವಾಯಿ ಮತ್ತಿತರು ಇದ್ದರು. ಬುಧವಾರ ವಾಲಿಬಾಲ್, ಹಾಕಿ, ಟೇಬಲ್ ಟೆನ್ನಿಸ್, ಜಾವೆಲಿನ್ ಥ್ರೋ, ಚಕ್ರ ಎಸೆತ, ಹ್ಯಾಮರ್ ಎಸೆತ ಸ್ಪರ್ಧೆಗಳು ನಡೆಯಲಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement