ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಿ

Lingaraj Badiger
Updated On : 16 Jan 2014, 10:48 am

ಕುಂದಗೋಳ: ಸ್ವಾಮಿ ವಿವೇಕಾನಂದರ ಆದರ್ಶ ಹಾಗೂ ತತ್ವಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಬದುಕು ಸಾಗಿದ್ದಲ್ಲಿ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ಪಾಟೀಲ ಹೇಳಿದರು.
ತಾಲೂಕಿನ ಕುಬಿಹಾಳ ಗ್ರಾಮದ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಯುವಕ ಸಂಘ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರಲ್ಲಿ ಅದ್ಭುತ್ ಶಕ್ತಿ ಅಡಗಿದೆ. ಅದನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡಲ್ಲಿ ಜೀವನದಲ್ಲಿ ಎಂತಹ ಸಾಧನೆಯನ್ನಾದರೂ ಮಾಡಲು ಸಾಧ್ಯ ಎಂದರು. ಮುಖ್ಯ ಅತಿಥಿಯಾಗಿದ್ದ ಕೆಸಿಸಿ ಬ್ಯಾಂಕ್ ನಿರ್ದೇಶಕ ಉಮೇಶ ಹೆಬಸೂರ, ಸ್ವಾಮಿ ವಿವೇಕಾನಂದ ಜೀವನ ಶೈಲಿ ಪ್ರತಿಯೊಬ್ಬ ಯುವಕರಿಗೂ ಮಾರ್ಗದರ್ಶಿಯಾಗಿದೆ ಎಂದರು. ಯುವ ಮುಖಂಡ ನಾಗನಗೌಡ ಸಾತ್ಮಾರ್ ಮಾತನಾಡಿದರು. ಕೊನೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಎಸ್.ಬಿ. ಸವಣೂರ, ಬಸವರಾಜ ದೇಶಪಾಂಡೆ, ಸಿ.ವಿ. ರಡ್ಡೇರ, ಸಿ. ವಿ. ಪಾಲಕರ, ಗಿರೀಶ ಹಂಚಿನಾಳ, ಶೇಖರಗೌಡ ಶಿರಕೋಳ, ವೈ. ಬಿ. ಬಿಳೇಬಾಳ, ಬಸವರಾಜ ಪೂಜಾರ, ಗುರುಸಿದ್ದಗೌಡ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement