ಇಂದು ಪವಾಡ ಬಯಲು
ಧಾರವಾಡ: ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘದ ವಿಜ್ಞಾನ ಮಂಟಪದ ಆಶ್ರಯದಲ್ಲಿ ಜ. 18ರಂದು ಬೆಳಗ್ಗೆ 10.30ಕ್ಕೆ ವೈಜ್ಞಾನಿಕ ಚಿಂತನೆ, ಪವಾಡ ಬಯಲು ಹಾಗೂ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಗಿದೆ. ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಡಿಡಿಪಿಐ ಡಾ. ಬಿ.ಕೆ.ಎಸ್. ವರ್ಧನ್ ಉದ್ಘಾಟಿಸಲಿದ್ದು, ದೊಡ್ಡಬಳ್ಳಾಪುರ ಪವಾಡ ಸಂಶೋಧನಾ ಕೇಂದ್ರದ ವೈಜ್ಞಾನಿಕ ಚಿಂತಕ ಹಾಗೂ ಮುಖ್ಯಸ್ಥ ಹುಲಿಕಲ್ ನಟರಾಜ್ ಪಾಲ್ಗೊಳ್ಳುವರು. ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಡಾ. ವಿ.ಡಿ. ಕರ್ಪೂರಮಠ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎನ್.ಎಂ. ಅಂಗಡಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಶಿಧರ ಕಡಕೋಳ, ಹೃದಯರೋಗ ತಜ್ಞ ಡಾ. ಎಸ್. ಪಿ. ಶೆಟ್ಟರ, ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಬಸವರಾಜ ಗುರಿಕಾರ ಇರುವರು. ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಗೌರವ ಅಧ್ಯಕ್ಷ ಶಂಕರ ಹಲಗತ್ತಿ ಅಧ್ಯಕ್ಷತೆ ವಹಿಸುವರು.
ಕಲಘಟಗಿ: ಯೋಧ ನಾಪತ್ತೆ
ಕಲಘಟಗಿ: ಭೂ ಸೇನಾ ಪಡೆಯ ಯೋಧ, ತಾಲೂಕಿನ ಜೊಡಹಳ್ಳಿ ಗ್ರಾಮದ ನಿವಾಸಿ ಪ್ರೇಮಚಂದ್ರ ಈರಪ್ಪ ಸುಳ್ಳದ ಕಾಣೆಯಾಗಿರುವ ಬಗ್ಗೆ ಹುಬ್ಬಳ್ಳಿಯ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 28ರಂದು ಧಾರವಾಡ ರೇಲ್ವೆ ನಿಲ್ದಾಣದಿಂದ ಪಂಜಾಬ್ ತೆರಳಿದ್ದ ಯೋಧ ಸುಳ್ಳದ, ಈ ವರೆಗೂ ಕರ್ತವ್ಯಕ್ಕೆ ಹಾಜರಾಗಿಲ್ಲ. ಮಾತ್ರವಲ್ಲದೇ, ಮನೆಗೂ ವಾಪಸಾಗಿಲ್ಲ ಎಂದು ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಪ್ರಕರಣ ದಾಖಲಾಗಿದೆ.
ಜೂಜಾಟ ವ್ಯಕ್ತಿ ಬಂಧನ
ಧಾರವಾಡ: ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಗರಗ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಇಮಾಮಹುಸೇನ್ ಮೋದಿನಸಾಬ್ ಹೋಳ್ಕರ ಬಂಧಿತ ಆರೋಪಿ. ಗ್ರಾಮದ ಬಸ್ ನಿಲ್ದಾಣದ ಬಳಿ ಮಟಕಾ ವ್ಯವಹಾರ ನಡೆಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ, ರು. 520 ನಗದು ಮತ್ತು ಮಟಕಾ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೊಪ್ಪಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.