ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಪದವಿ ಕಾಲೇಜುಗಳಲ್ಲಿ 'ನೈಪುಣ್ಯ ನಿಧಿ' ಜಾರಿ: ದೇಶಪಾಂಡೆ

Vishwanath S
Updated On : 20 Jan 2014, 1:15 am

ಹುಬ್ಬಳ್ಳಿ: ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಿಸುವಂಥ 'ನೈಪುಣ್ಯ ನಿಧಿ' ಎಂಬ ಹೊಸ ಯೋಜನೆಯನ್ನು ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ 15-20 ದಿನಗಳಲ್ಲಿ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ವಿದ್ಯಾನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೇಶಪಾಂಡೆ ಫೌಂಡೇಷನ್ ಹಮ್ಮಿಕೊಂಡಿದ್ದ 4ನೇ 'ಯುವ ಸಮಿತ್‌'ನ್ನು ಭಾನುವಾರ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ನೈಪುಣ್ಯತೆ ಇದ್ದೇ ಇರುತ್ತದೆ. ಅದನ್ನು ಗುರುತಿಸುವ ಕೆಲಸವಾಗಬೇಕಿದೆ. 43 ಕೌಶಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದ್ದಲ್ಲಿ ಆಯಾ ಕ್ಷೇತ್ರದಲ್ಲಿ ಅವರು ಸಾಧನೆಗೈಯಲು ಸಾಧ್ಯವಾಗುತ್ತದೆ ಎಂದರು.
ನಿಶ್ಚಿತ ಗುರಿ ಹೊಂದಿ ಕಠಿಣ ಪರಿಶ್ರಮದಿಂದ ಮುನ್ನುಗ್ಗಿದಲ್ಲಿ ಜೀವನದಲ್ಲಿ ಮಹತ್ತರ ಸಾಧನೆಗೈಯಲು ಸಾಧ್ಯ. ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಐಚ್ಛಿಕ ಮಾದರಿ ಪಠ್ಯ ಕ್ರಮವಿರುವುದರಿಂದ ವಿದ್ಯಾರ್ಥಿಗಳ ಬುದ್ಧಿಮಟ್ಟ ಅಷ್ಟೊಂದು ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 5 ಕೋಟಿ ವೆಚ್ಚದಲ್ಲಿ ಅವಿಷ್ಕಾರ ಕ್ಲಬ್ ತೆರೆಯಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement