ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಇಂದು ಬೆಳಗಾವಿಯಲ್ಲಿ ಪ್ರತಿಭಟನೆ

Mainashree
Updated On : 21 Jan 2014, 12:26 pm

ಧಾರವಾಡ: ಬೆಂಗಳೂರಿನ ವಿಧಾನ ಸೌಧದಲ್ಲಿರುವ ಎಲ್ಲ ಇಲಾಖೆಯ ಕಚೇರಿಗಳು ಬೆಳಗಾವಿ ಸುವರ್ಣ ಸೌಧದಲ್ಲಿಯೂ  ಕಾರ್ಯ ನಿರ್ವಹಿಸಬೇಕು ಎಂದು ಆಗ್ರಹಿಸಿ ಜ. 21 ರಂದು ಬೆಳಗಾವಿ ಸುವರ್ಣ ಸೌಧದ ಎದುರು ಉತ್ತರ ಕರ್ನಾಟಕ ವಿಕಾಸ ವೇದಿಕೆ ವತಿಯಿಂದ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಮುಖಂಡ ಗುರುರಾಜ ಹುಣಸಿಮರದ ತಿಳಿಸಿದರು.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಹುಣಸಿಮರದ, ಉತ್ತರ ಕರ್ನಾಟಕದ ಏಳು ಜಿಲ್ಲೆಗಳಿಂದ ಮತ್ತು ಹೈದರಾಬಾದ್ ಕರ್ನಾಟಕದ ಆರು ಜಿಲ್ಲೆಗಳಿಂದ ವಿವಿಧ ಪಕ್ಷದ ಮುಖಂಡರು ಮತ್ತು ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ರಿಂದ ಸಂಜೆ 4ರ ವರೆಗೆ ಬೇಡಿಕೆ ಈಡೇರಿಸುವಂತೆ ಒತ್ತಯಿಸಿ ಪ್ರತಿಭಟಿಸಲಾಗುವುದು ಎಂದರು.
ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಯ ಮುಖಂಡರು ಮತ್ತು ಹೋರಾಟಗಾರರನ್ನು ಒಳಗೊಂಡ ಉತ್ತರ ಕರ್ನಾಟಕ ವಿಕಾಸ ವೇದಿಕೆ ಹುಟ್ಟು ಹಾಕಲಾಗುತ್ತಿದೆ.
ರಾಜ್ಯದಲ್ಲಿನ ವಿವಿಧ ಪಕ್ಷಗಳು ಅಧಿಕಾರಕ್ಕೆ ಬಂದರು ಸಹ ಉತ್ತರ ಕರ್ನಾಟಕವನ್ನು ಅಭಿವೃದ್ಧಿಯಿಂದ ವಂಚಿತವನ್ನಾಗಿ ಮಾಡಿವೆ ಎಂದರು.
ಈ ರಾಜ್ಯದ ಶೇ. 75ರಷ್ಟು ಸಮಸ್ಯೆಗಳು ಉತ್ತರ ಕರ್ನಾಟಕದಲ್ಲಿಯೇ ಇವೆ. ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ವಿವಿಧ ಹಂತದಲ್ಲಿ ಪ್ರತಿಭಟನೆ ನಡೆಸಲಾಗುವುದು.
ಈಗಾಗಲೇ ಮುಂಬೈ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಮುಖಂಡರೊಂದಿಗೆ ವೇದಿಕೆ ಚರ್ಚೆ ನಡೆಸಲಾಗಿದೆ. ಮುಂದಿನ ಮೂರು ತಿಂಗಳೊಳಗಾಗಿ ಜಿಲ್ಲಾ ಪದಾಧಿಕಾರಿಗಳನ್ನು ನೇಮಕ ಮಾಡಿ, ಈ ವಿಕಾಸ ವೇದಿಕೆಯನ್ನು ಅಧಿಕೃತವಾಗಿ ಹೋರಾಟಕ್ಕೆ ಅಣಿಗೊಳಿಸಲಾಗುವುದು ಎಂದರು.
ಶಂಕ್ರಪ್ಪ ಅಂಬಲಿ, ನಾಗಯ್ಯ ಹಿರೇಮಠ, ರಾಜು ಹಿರೇಒಡೆಯರ್, ಶಂಕರ ಮಾಳೆ, ಶಿವಾನಂದ ಕವಳಿ, ಭೀಮಪ್ಪ ಕಸಾಯಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement