ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಇಂದಿನಿಂದ ರಾಷ್ಟ್ರಮಟ್ಟದ ವಿಚಾರ ಸಂಕಿರಣ

Vishwanath S
Updated On : 25 Jan 2014, 12:35 pm

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ-ಪತ್ರಿಕೋದ್ಯಮ ವಿಭಾಗ ಮತ್ತು ಮಾಧ್ಯಮ ಅಕಾಡೆಮಿಯಿಂದ ಜ. 25, 26ರಂದು ರಾಷ್ಟ್ರಮಟ್ಟದ ವಿಚಾರ ಸಂಕಿರಣ, ರೇನ್ಬೊ ಮಾಧ್ಯಮ ಉತ್ಸವ ಹಮ್ಮಿಕೊಳ್ಳಲಾಗಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಎ.ಎಸ್. ಬಾಲಸುಬ್ರಹ್ಮಣ್ಯ, ಜ. 25ರಂದು ಬೆಳಗ್ಗೆ 10.30ಕ್ಕೆ ನವ ಮಾದ್ಯಮ ಮತ್ತು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ವಿಚಾರ ಸಂಕಿರಣವನ್ನು ನಾಡೋಜ ಡಾ. ಪಾಟೀಲ ಪುಟ್ಟಪ್ಪ ಉದ್ಘಾಟಿಸುವರು.
ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಎ. ಪೊನ್ನಪ್ಪ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಕುಲಸಚಿವ ಚಂದ್ರಮಾ ಕಣಗಲಿ ಭಾಗವಹಿಸುವರು. ತಲಿಂ ಸಂಶೋಧನಾ ಪ್ರತಿಷ್ಠಾನದ ಮಹಾನಿರ್ದೇಶಕ ಡಾ. ವಿನೋದ ಅಗರವಾಲ್ ಆಶಯ ಭಾಷಣ ಮಾಡುವರು. ನೂತನ ತಂತ್ರಜ್ಞಾನ ತಜ್ಞ ಯು.ಬಿ. ಪವನಜ, ಪಾಂಡಿಚೇರಿ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ವಿ.ಟಿ. ಪಾಟೀಲ ಹಾಗೂ ಪುಣೆಯ ಸಂವಹನ ಪ್ರಾಧ್ಯಾಪಕ ಡಾ. ಪೋಖರಾಪುರಕರ್ ವಿಶೇಷ ಉಪನ್ಯಾಸ ನೀಡುವರು. ಇದೇ ಸಂದರ್ಭದಲ್ಲಿ ಸಂಶೋಧನಾ ಸಾರಾಂಶ ಒಳಗೊಂಡ ಮಾಧ್ಯಮ ಸೌರಭ ಕೃತಿ ಸಹ ಬಿಡುಗಡೆಯಾಗಲಿದೆ ಎಂದು ಹೇಳಿದರು. ಕವಿವಿ ಪತ್ರಿಕೋದ್ಯಮ ವಿಭಾಗ ಆಯೋಜಿಸಿರುವ ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದ 300 ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸುವರು. ರೇಡಿಯೋ ಜಾಕಿ, ಟಿವಿ ಸುದ್ದಿವಾಚನ, ಸಂದರ್ಶನ, ಸಾಕ್ಷಚಿತ್ರ ನಿರ್ಮಾಣ, ಮಾದ್ಯಮ ಕ್ವಿಜ್, ಛಾಯಾಚಿತ್ರ ಸ್ಪರ್ಧೆ ಸಹ ಏರ್ಪಡಿಸಲಾಗಿದೆ. ಮಾದ್ಯಮ ಉತ್ಸವ ಅಂಗವಾಗಿ ಮಾಧ್ಯಮ ಹಿನ್ನೋಟ ವಸ್ತುಪ್ರದರ್ಶನ ಹಾಗೂ ಪತ್ರಿಕಾ ಛಾಯಾಚಿತ್ರ ಪ್ರದರ್ಶನ  ನಡೆಯಲಿದೆ. ಜ. 26ರಂದು ಸಂಜೆ 5.30ಕ್ಕೆ ಸಮಾರೋಪ ನಡೆಯಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾಧರ ಮೊದಲಿಯಾರ್ ಸಮಾರೋಪ ನುಡಿಗಳನ್ನಾಡುವರು. ಧಾರವಾಡ ಆಕಾಶವಾಣಿ ಕೇಂದ್ರ ನಿರ್ದೇಶಕ ಸಿ.ಯು. ಬೆಳ್ಳಕ್ಕಿ, ಕವಿವಿ ಕುಲಪತಿ ಡಾ.ಎಚ್.ಬಿ. ವಾಲೀಕಾರ ಭಾಗವಹಿಸುವರು ಎಂದು ಡಾ. ಬಾಲಸುಬ್ರಹ್ಮಣ್ಯ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement