ವಿಪಕ್ಷ ನಾಯಕ ಜವಾಬ್ದಾರಿ ಸಮರ್ಥ ನಿರ್ವಹಣೆ: ಶೆಟ್ಟರ್
ಹುಬ್ಬಳ್ಳಿ: ವಿರೋಧ ಪಕ್ಷ ನಾಯಕನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದಾಗಿ ನೂತನವಾಗಿ ವಿರೋಧಪಕ್ಷ ನಾಯಕರಾಗಿ ನೇಮಕಗೊಂಡಿರುವ ಜಗದೀಶ ಶೆಟ್ಟರ್ ಹೇಳಿದರು.
ಶುಕ್ರವಾರ ಹುಬ್ಬಳ್ಳಿಗೆ ಆಗಮಿಸಿದ ಅವರನ್ನು ಪಕ್ಷದ ಮುಖಂಡರು ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಪಕ್ಷ ನನಗೆ ವಿರೋಧ ಪಕ್ಷ ಸ್ಥಾನ ನೀಡಿದೆ. ಈ ಹುದ್ದೆಯನ್ನು ಸಮರ್ಥವಾಗಿ ನಿರ್ವಹಿಸುವುದು ಅಲ್ಲದೇ, ರಾಜ್ಯದ ಬೇಕು ಬೇಡಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು. ಈ ಹಿಂದೆಯೂ ತಾವು ವಿರೋಧಪಕ್ಷದ ನಾಯಕನಾಗಿ ನಾಲ್ಕೂವರೆ ವರ್ಷಗಳ ಕಾಲ ಜವಾಬ್ದಾರಿ ನಿರ್ವಹಿಸಿದ್ದೇನೆ. ಇದೀಗ ಒದಗಿ ಬಂದಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ತಿಳಿಸಿದರು. ಈ ಸಂದರ್ಭ ವಿಭಾಗೀಯ ಸಹಪ್ರಮುಖ ಮಹೇಶ ಟೆಂಗಿನಕಾಯಿ, ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಲಿಂಗರಾಜ ಪಾಟೀಲ, ಮಲ್ಲಿಕಾರ್ಜುನ ಸಾವಕಾರ್, ನಾಗೇಶ ಕಲ್ಬುರ್ಗಿ, ಮಾಜಿ ಮೇಯರ್ ಡಾ. ಪಾಂಡುರಂಗ ಪಾಟೀಲ ಮತ್ತಿತರರು ಇದ್ದರು.