ಆಶ್ರಯ ಮನೆ ವಿತರಿಸಿ
ಹುಬ್ಬಳ್ಳಿ: ಹುಬ್ಬಳ್ಳಿ ನಗರದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡವರಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ನೀಡುವುದಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅವರಿಗೆ ಕನ್ನಡ ಕ್ರಾಂತಿ ದೀಪ ಸಂಘಟನೆ ಧಾರವಾಡ ಜಿಲ್ಲಾಧ್ಯಕ್ಷೆ ಭರಮವ್ವ ಮ್ಯಾಗಳಮನಿ ಮನವಿ ಸಲ್ಲಿಸಿದರು. ಶ್ರೀಮಂತರ ಮನೆಗಳಲ್ಲಿ ಮನೆಗೆಲಸ ಮಾಡಿಕೊಂಡು ಜೀವನ ಮಾಡುತ್ತಿರುವ ನಮಗೆ ಬಾಡಿಗೆ ನೀಡಿ ಜೀವನ ನಡೆಸುವುದು ಕಷ್ಟವಾಗಿದ್ದು, ಆದ್ದರಿಂದ ಸರ್ಕಾರ ತಕ್ಷಣ ಆಶ್ರಯ ಯೋಜನೆಯಡಿ ಬಡ ಮಹಿಳೆಯರಿಗೆ ಮನೆಗಳನ್ನು ವಿತರಿಸಬೇಕು. ಒಂದು ವೇಳೆ ಸರ್ಕಾರ ಆಶ್ರಯ ಯೋಜನೆಯಡಿ ಮನೆಗಳನ್ನು ನೀಡದಿದ್ದಲ್ಲಿ ಸರ್ಕಾರಿ ಜಾಗದಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳುವುದಕ್ಕೆ ತೀರ್ಮಾನಿಸಿದ್ದು, ಇದಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಕನ್ನಡ ಕ್ರಾಂತಿ ದೀಪ ಸಂಘಟನೆಯ ರಾಜ್ಯ ಉಪಾಧ್ಯಕ್ಷ ದೇವೇಂದ್ರಪ್ಪ ಇಟಗಿ, ಶಿವಕುಮಾರ ಕದಂ, ಸಂಜೀವ ದುಮ್ಮಕನಾಳ, ವಿಶ್ವನಾಥ ಚಂದಾವರಿ ಇದ್ದರು.