ಭಾರದ್ವಜ್ ಪೋಷಕರಿಗೆ ತಿಳಿಸಿದ್ದಾರೆ.ಇಂದು ಎಬಿವಿಪಿ 33ನೇ ರಾಜ್ಯ ಸಮ್ಮೇಳನ
ಹುಬ್ಬಳ್ಳಿ: ಇಲ್ಲಿಯ ಬಿವಿಬಿ ಎಂಜನಿಯರಿಂಗ್ ಕಾಲೇಜಿನ ಆವರಣದಲ್ಲಿ ಜ.31ರಿಂದ ಮೂರು ದಿನಗಳವರೆಗೆ ನಡೆಯಲಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ 33ನೇ ರಾಜ್ಯ ಸಮ್ಮೇಳನದ ಸಿದ್ಧತೆ ಪೂರ್ಣಗೊಂಡಿದೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 2 ಸಾವಿರ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 22 ವರ್ಷಗಳ ನಂತರ ಹುಬ್ಬಳ್ಳಿಯಲ್ಲಿ ಎಬಿವಿಪಿ ರಾಜ್ಯ ಸಮ್ಮೇಳನ ನಡೆಯಲಿದೆ.