ಬಜೆಟ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜು. 15
ಕೇಂದ್ರದ ಎನ್ಡಿಎ ಸರ್ಕಾರದ ಬಜೆಟ್ ವಿರೋಧಿಸಿ ಧಾರವಾಡ ಲೋಕಸಭೆ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ಕೇಂದ್ರದ ಬಜೆಟ್ನಲ್ಲಿ ಕಾರ್ಪೊರೇಟ್ ಸಂಸ್ಥೆಗಳಿಗೆ ಹಾಗೂ ಉದ್ಯಮಗಳಿಗೆ ಆದ್ಯತೆ ನೀಡಲಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನತೆಯ ಅಭಿವೃದ್ಧಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು ದೂರಿದರು.ಉತ್ತಮ ದಿನಗಳು ಬರುತ್ತವೆಂದು ಹೇಳುತ್ತಲೇ ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಏರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ ಮುಖಂಡರಾದ ನಾಗರಾಜ ಗೌರಿ, ಶಿವಕುಮಾರ ರಾಯನಗೌಡರ, ಆಕಾಶ ಕೋನರಿ, ರಾಜಶೇಖರ ಮೆಣಸಿನಕಾಯಿ, ಬಾಬಾಜಾನ ಮುಧೋಳ, ಅನ್ವರ ಮುಧೋಳ, ಮಂಜುನಾಥ ಜಾದವ, ಸಂತೋಷ ಜಕ್ಕಪ್ಪನವರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.