ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇರ ಸಂದರ್ಶನ
ಹುಬ್ಬಳ್ಳಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜು. 28ರಂದು ಹುಬ್ಬಳ್ಳಿಯ ಟ್ರಿನಿಟಿ ಟೆಕ್ನಾಲಜಿಸ್ ಸಾಫ್ಟ್ವೇರ್ ಸಲ್ಯೂಷನ್ಸ್ ಮತ್ತು ಸಾಚಿ ಟೆಕ್ನಾಲಜಿಸ್ ವತಿಯಿಂದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಯಲಿದೆ. ಕಂಪ್ಯೂಟರ್ ಜ್ಞಾನ ಹೊಂದಿರುವ ಹಾಗೂ ಡಾಟಾ ಎಂಟ್ರಿಯಲ್ಲಿ ಪರಿಣತಿ ಪಡೆದ ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹರಾಗಿದ್ದು, ವಿಕಲಾಂಗ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳು ಜು. 28 ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ನವನಗರಕ್ಕೆ ತಮ್ಮ ಪರಿಚಯ ಪತ್ರ ವಿದ್ಯಾರ್ಹತೆಯ ಎಲ್ಲ ಮೂಲ ಪ್ರಮಾಣ ಪತ್ರಗಳು, ಒಂದೊಂದು ಯಥಾಪ್ರತಿ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಖುದ್ದಾಗಿ ಸಂದರ್ಶನಕ್ಕೆ ಹಾಜರಿರಲು ಉದ್ಯೋಗ ವಿನಿಮಯ ಕಚೇರಿ ಸಹಾಯಕ ನಿರ್ದೇಶಕ ಶ್ರೀಕಾಂತ ಮಾಲಗತ್ತಿ ತಿಳಿಸಿದ್ದಾರೆ.