ಧಾರವಾಡ

28ರಿಂದ ಕಾನೂನು ಸಾಕ್ಷರತಾ ರಥ

ಧಾರವಾಡ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸಾಕ್ಷರತಾ ರಥ ಜು. 28ರಿಂದ 31ರ ವರೆಗೆ ಧಾರವಾಡ ನಗರ ಮತ್ತು ತಾಲೂಕಿನಲ್ಲಿ ಸಂಚರಿಸಲಿದ್ದು, ಪ್ರತಿ ದಿನ ಮೂರು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜು. 28ರಂದು ಸತ್ತೂರ ಹನುಮಾನ ದೇವಸ್ಥಾನ ಆವರಣದಲ್ಲಿ ಬೆಳಗ್ಗೆ 10ಕ್ಕೆ ಮೊದಲ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಮಧ್ಯಾಹ್ನ 12ಕ್ಕೆ ರಾಯಾಪುರದ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ನಡೆಯಲಿದ್ದು, 3ನೇ ಕಾರ್ಯಕ್ರಮ ಮಧ್ಯಾಹ್ನ 1.30ಕ್ಕೆ ನವಲೂರಿನ ಬನಶಂಕರಿ ದೇವಸ್ಥಾನದಲ್ಲಿ ನಡೆಯಲಿದೆ. ಜು. 30ರಂದು ಬೆಳಗ್ಗೆ 9.30ಕ್ಕೆ ಕೆಎಲ್‌ಇ ಸಂಸ್ಥೆಯ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಕಾಲೇಜು, ನಂತರ 11ಕ್ಕೆ ಬಿ.ಜಿ.ಎಸ್. ಆಂಗ್ಲ ಮಾಧ್ಯಮ ಪ್ರೌಢಶಾಲೆ, ಮಧ್ಯಾಹ್ನ 2ಕ್ಕೆ ಕೆಪಿಇಎಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ಜು. 31ರಂದು ಬೆಳಗ್ಗೆ 10ಕ್ಕೆ ಕೇಂದ್ರೀಯ ವಿದ್ಯಾಲಯ, ನಂತರ ಮಧ್ಯಾಹ್ನ 12ಕ್ಕೆ ಕ್ಯಾರಕೊಪ್ಪದ ನವೋದಯ ವಸತಿ ಶಾಲೆ, ಮಧ್ಯಾಹ್ನ 3ಕ್ಕೆ ಹೆಬ್ಬಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ.
ಈ ಎಲ್ಲ ಕಾರ್ಯಕ್ರಮಗಳಲ್ಲಿ ನ್ಯಾಯಾಧೀಶರು, ನ್ಯಾಯವಾದಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಕಾನೂನು ಅರಿವು ಮೂಡಿಸುತ್ತಾರೆ. ಸಾರ್ವಜನಿಕರು ಈ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಂ. ರಮೇಶರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!