ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

Lingaraj Badiger
Updated On : 28 Jul 2014, 10:43 am

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜು. 27
ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ನಗರದ ಇಂದಿರಾ ಗಾಜಿನ ಮನೆಯಲ್ಲಿ ಭಾನುವಾರ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.
ಚಿತ್ರಕಲಾ ಶಿಲ್ಪಿ ಡಿ.ವಿ. ಹಾಲಬಾವಿ ಸ್ಮಾರಕ ರಾಷ್ಟ್ರೀಯ ಟ್ರಸ್ಟ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಈ ಸ್ಪರ್ಧೆ ಏರ್ಪಡಿಸಲಾಗಿತ್ತು. ಧಾರವಾಡದಲ್ಲಿ ನಡೆದ ಸ್ಪರ್ಧೆಯಲ್ಲಿ 45ಕ್ಕೂ ಹೆಚ್ಚು ಶಾಲೆಗಳಿಂದ ಸುಮಾರು 400 ಮಕ್ಕಳು ಮತ್ತು ಹುಬ್ಬಳ್ಳಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಸುಮಾರು 1,500 ವಿಧ್ಯಾರ್ಥಿಗಳು ಇಂದು ತಮ್ಮ ಕಲ್ಪನಾ ಚಿತ್ರಗಳಿಗೆ ಬಣ್ಣದ ಮೆರಗು ನೀಡಿದರು.
ಧಾರವಾಡದ ಸ್ಪರ್ಧಾ ಸ್ಥಳದಲ್ಲಿ ಟ್ರಸ್ಟ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಬಿ.ಡಿ.ಹಿರೇಗೌಡರ, ಡಿಡಿಪಿಐ ಡಾ. ಬಿ.ಕೆ.ಎಸ್. ವರ್ಧನ್, ಬಿಇಓ ಹುಡೇದಮನಿ, ಕಲಾವಿದರಾದ ಬಿ. ಮಾರುತಿ, ಎಂ.ಆರ್. ಬಾಳಿಕಾಯಿ, ಸಿ.ಸಿ. ಬಾರಕೆರ, ಶಿವಶಂಕರ ಹಿರೇಮಠ, ಇತರ ಶಿಕ್ಷಕ ಸಿಬ್ಬಂದಿ ಭಾಗವಹಿಸಿದ್ದರು. ಹುಬ್ಬಳ್ಳಿಯ ಇಂದಿರಾಗಾಜಿನ ಮನೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಸುರೇಶ ಹಾಲಭಾವಿ, ಪಾರ್ವತಿ ಹಾಲಭಾವಿ, ಶಶಿ ಸಾಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement