ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಕಬ್ಬು ಬೆಳೆಗಾರರಿಗೆ ಸಚಿವರಿಂದಲೇ ಮೋಸ: ಜಗದೀಶ್ ಶೆಟ್ಟರ್

Lingaraj Badiger
Updated On : 21 Jun 2014, 11:14 am

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜೂ. 20
ಸಕ್ಕರೆ ಕಾರ್ಖಾನೆಗಳನ್ನು ಹೊಂದಿರುವ ಸಚಿವ ಶಾಮನೂರು ಶಿವಶಂಕರಪ್ಪ, ಸತೀಶ ಜಾರಕಿಹೊಳಿ, ಪ್ರಕಾಶ ಹುಕ್ಕೇರಿ, ಡಿ.ಬಿ. ಇನಾಮದಾರ ಅವರೇ ಕಬ್ಬು ಬೆಳೆಗಾರರಿಗೆ ಸರ್ಕಾರ ನಿಗದಿಪಡಿಸಿರುವ ಬೆಲೆ ನೀಡುತ್ತಿಲ್ಲ. ಸರ್ಕಾರ ಮೊದಲು ಇವರನ್ನು ಸಂಪುಟದಿಂದ ಕೈಬಿಡಲಿ ಎಂದು ಒತ್ತಾಯಿಸಿರುವ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್, ಬಿಜೆಪಿ ಮುಖಂಡರು ತಪ್ಪೆಸಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಕ್ಕರೆ ಕಾರ್ಖಾನೆಗಳು ಬೆಂಬಲ ಬೆಲೆ ವಿಷಯದಲ್ಲಿ ತಡೆಯಾಜ್ಞೆ ತಂದಿವೆ ಎಂದು ಸಬೂಬು ಹೇಳಲಾಗುತ್ತಿದೆ. ಸರ್ಕಾರ ಈ ವಿಷಯವಾಗಿ ಅಪೀಲು ಹೋಗಲಿ. ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡದಿರುವ ಕಾರ್ಖಾನೆ ಮಾಲೀಕರು ಕಾಂಗ್ರೆಸ್, ಬಿಜೆಪಿ ಸೇರಿದಂತೆ ಯಾರೇ ಆಗಲಿ ಸರ್ಕಾರ ಕ್ರಮ ಕೈಗೊಳ್ಳಲಿ ಎಂದರು.
ರಾಜ್ಯಪಾಲರಿಗೆ ಮನವಿ: ಪರಿಷತ್ತಿ ನಾಮನಿರ್ದೇಶನ ಕೋಟಾಕ್ಕೆ ವಿ.ಎಸ್. ಉಗ್ರಪ್ಪ, ಇಕ್ಬಾಲ್ ಅಹ್ಮದ್ ಸರಡಗಿಯವರನ್ನು ನಾಮಕರಣ ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಸರಿಯಲ್ಲ. ರಾಜಕೀಯ ಸೋಂಕಿರುವವರು ಪರಿಷತ್‌ಗೆ ಬೇಡ. ಈ ನಾಮಕರಣ ರದ್ದುಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮುಖಂಡರ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಲಿದೆ ಎಂದರು.
ಗದಗನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 18 ಮಂದಿ ಮೃತಪಟ್ಟಿರುವುದಕ್ಕೆ ಸಂಚಾರಿ ಸುರಕ್ಷತಾ ನಿಯಮ ಪಾಲಿಸದಿರುವುದೇ ಕಾರಣ. ಈ ನಿಟ್ಟಿನಲ್ಲಿ ಸರ್ಕಾರ ಸಂಚಾರಿ ನಿಯಮಗಳನ್ನು ಬಿಗಿಗೊಳಿಸಬೇಕಿದೆ. ತೆರೆದ ಕೊಳವಿ ಬಾವಿ ಮುಚ್ಚಲು ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement