ಧಾರವಾಡ

ಹಲ್ಲೆ: ಪೌರಕಾರ್ಮಿಕರ ಪ್ರತಿಭಟನೆ

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜೂ. 30
ಹಂದಿ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಗುತ್ತಿಗೆ ಪೌರಕಾರ್ಮಿಕರ ಮೇಲೆ ಹಂದಿ ಮಾಲೀಕರು ನಡೆಸಿದ ಹಲ್ಲೆ ಖಂಡಿಸಿ, ಧಾರವಾಡ ಜಿಲ್ಲಾ ಪ. ಜಾತಿ-ಪಂಗಡ ಪೌರಕಾರ್ಮಿಕರ ಮತ್ತು ನೌಕರರ ಸಂಘದ ನೇತೃತ್ವದಲ್ಲಿ ನೂರಾರು ಪೌರಕಾರ್ಮಿಕರು ಮಹಾನಗರ ಪಾಲಿಕೆ ಮುಖ್ಯ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಮೇಯರ್, ಆಯುಕ್ತರ ಸೂಚನೆ ಮೇರೆಗೆ ನಗರದಲ್ಲಿ ಹಂದಿಗಳನ್ನು ಹಿಡಿಯಲು ಹೋಗಿದ್ದ ತಮ್ಮ ಮೇಲೆ ಹಂದಿಗಳ ಮಾಲೀಕರು ಕಲ್ಲು, ಬಡಿಗೆ ಹಾಗೂ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾನಿರತ ಪೌರಕಾರ್ಮಿಕರು ಒತ್ತಾಯಿಸಿದರು.
ಹಲ್ಲೆಯಿಂದಾಗಿ 8 ಪೌರಕಾರ್ಮಿಕರು ಗಾಯಗೊಂಡಿದ್ದಾರೆ. ಹಲ್ಲೆ ನಡೆದ ತಕ್ಷಣ ಪಾಲಿಕೆ ಅಧಿಕಾರಿಗಳು ಸ್ಥಳದಿಂದ ಪಲಾಯನಗೈದಿದ್ದು, ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸುವ ಸೌಜನ್ಯವನ್ನೂ ಅಧಿಕಾರಿಗಳು ತೋರಲಿಲ್ಲ ಎಂದು ಆರೋಪಿಸಿದರು.
ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಬೇಕು. ಹಲ್ಲೆಗೊಳಗಾದ ಪೌರಕಾರ್ಮಿಕರಿಗೆ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಮೇಯರ್ ಶಿವು ಹಿರೇಮಠ, ಆಯುಕ್ತ ರಮಣದೀಪ ಚೌಧರಿಗೆ ಮನವಿ ಸಲ್ಲಿಸಿದರು.
ಪೌರಕಾರ್ಮಿಕರಾದ ಸೋಮು ಮೊರಬದ, ಮಲ್ಲಪ್ಪ ಬೆಳಗಾವಿ, ನಿಂಗಪ್ಪ ಹುಲಗೂರ, ನಾಗೇಶ ದೊಡ್ಡಮನಿ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!