ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಉಕ ಅಭಿವೃದ್ಧಿಗೆ ಜನಪ್ರತಿನಿಧಿಗಳು ಒಗ್ಗೂಡಿ

Mainashree
Updated On : 7 Mar 2014, 10:36 am

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಮಾ. 6
ಅವಳಿ ನಗರಕ್ಕೆ ಜೆನರ್ಮ್ ಯೋಜನೆ ತರುವುದು ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಈ ಭಾಗದ ಜನಪ್ರತಿನಿಧಿಗಳೆಲ್ಲ ಒಗ್ಗಟ್ಟಾಗಿ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಪ್ರಜಾರಾಷ್ಟ್ರ ಯುವಶಕ್ತಿಯ ಮೊಹ್ಮದಗೌಸ್ ಬೆಟಗೇರಿ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
 ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರದ ಗಮನ ಸೆಳೆಯಲು ಶೀಘ್ರ ಜಿಲ್ಲಾಧಿಕಾರಿ ಅಥವಾ ತಹಸೀಲ್ದಾರರ ಮುಖಾಂತರ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕದ ಶವ ಹೊರುವುದಾಗಿ ಹೇಳಿಕೆ ನೀಡಿರುವ ಬೆಳಗಾವಿ ಶಾಸಕ ಸಂಭಾಜಿರಾವ್ ಪಾಟೀಲ ಹಾಗೂ ರಾಜ್ಯವನ್ನು ಇಬ್ಭಾಗ ಮಾಡುವ ಕುರಿತು ಮಾತನಾಡಿದ್ದ ಮಾಜಿ ಸಚಿವ ಉಮೇಶ ಕತ್ತಿ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಎ.ಡಿ. ಮೊಮಿನ್, ಶಿವಪ್ರಸಾಗದ ಗದ್ದಿಕೇರಿ, ಸುಬೇದಅಹ್ಮದ ಜಲಾಲ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement