ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ವಿದ್ಯಾರ್ಥಿಗಳ ಉನ್ನತಿಗೆ ಎನ್ನೆಸ್ಸೆಸ್ ಶಿಬಿರ ಸಹಕಾರಿ

Lingaraj Badiger
Updated On : 13 Mar 2014, 11:27 am

ಅಣ್ಣಿಗೇರಿ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಎನ್‌ಎಸ್‌ಎಸ್ ಶಿಬಿರಗಳು ಸಾಕಷ್ಟು ಸಹಾಯಕಾರಿಯಾಗಲಿವೆ ಎಂದು ಡಾ. ಸುಧಾ ಕೌಜಗೇರಿ ಅಭಿಪ್ರಾಯಪಟ್ಟರು.
ಸಮೀಪದ ನಲವಡಿ ಗ್ರಾಮದ ಎಂ.ಬಿ. ಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಶಿಕ್ಷಣ ವ್ಯವಸ್ಥೆಯಿಂದಲೇ ವಿದ್ಯಾರ್ಥಿಯ ವ್ಯಕ್ತಿತ್ವದ ಸಂಪೂರ್ಣ ವಿಕಾಸ ಸಾಧ್ಯ ಎಂದ ಅವರು ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಮನೋಭಾವನೆ ಮೂಡಿಸುತ್ತವೆ ಎಂದರು.
ಮುಖ್ಯ ಅತಿಥಿಯಾಗಿದ್ದ ಎಚ್.ಕೆ. ಪಾಟೀಲ, ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಬದುಕಿನುದ್ದಕ್ಕೂ ಕಠಿಣ ಪರಿಶ್ರಮ ಮಾಡಿದ್ದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
ಸೌಮ್ಯಾ ಮಂಟೂರ, ರೇಣುಕಾ ಚವಡಿ, ಮಂಜುನಾಥ ಅಳಗವಾಡಿ, ವೈ.ಐ. ಚವ್ಹಾಣ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement