ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಬಮ್ಮಿಗಟ್ಟಿ: ಭಾರತ ನಿರ್ಮಾಣ ಯಾತ್ರೆ

Lingaraj Badiger
Updated On : 18 Mar 2014, 12:13 pm

ಕಲಘಟಗಿ: ತಾಲೂಕಿನ ಬಮ್ಮಿಗಟ್ಟಿ ಹಾಗೂ ತಾವರಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಭಾರತ ನಿರ್ಮಾಣ ಯಾತ್ರೆ ನಡೆಸಿದರು.
ಗ್ರಾಮದ ಗ್ರಾಮದೇವಿ ದೇವಸ್ಥಾನದ ಆವರಣದಿಂದ ಪ್ರಾರಂಭಗೊಂಡ ಯಾತ್ರೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೇಂದ್ರದ ಯುಪಿಎ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನೋಪಯೋಗಿ ಯೋಜನೆಗಳ ಬಗ್ಗೆ ಮತದಾರರಲ್ಲಿ ತಿಳಿವಳಿಕೆ ಮೂಡಿಸಲಾಯಿತು.
ಬಮ್ಮಿಗಟ್ಟಿ, ನೆಲ್ಲಿಹರವಿ, ಅರಳಿಹೊಂಡ, ಯಲವದಾಳ, ತಾವರಗೇರಿ ಸೇರಿದಂತೆ ಮತ್ತಿತರ ಪ್ರಮುಖ ಪ್ರದೇಶಗಳಲ್ಲಿ ತೆರಳಿದ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಯುವ ಮುಖಂಡರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಕಿರು ಹೊತ್ತಿಗೆಯನ್ನು ಮತದಾರನ ಕೈಗೆ ನೀಡಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸುವಂತೆ ವಿನಂತಿಸಿಕೊಂಡರು. ಜಿಪಂ ಮಾಜಿ ಅಧ್ಯಕ್ಷ ಎಸ್.ಆರ್. ಪಾಟೀಲ, ಎಸ್.ಎನ್. ಚಿಕ್ಕಣ್ಣವರ, ಕಸ್ತೂರಿ ಶಾಂತಾರಾಮ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬಿ.ವೈ. ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ವಿ. ಮಾಡಳ್ಳಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement