ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಕೋರ್ಟ್ ಆವರಣದಲ್ಲೇ ಯುವಕ ಆತ್ಮಹತ್ಯೆಗೆ ಯತ್ನ

Lingaraj Badiger
Updated On : 19 Mar 2014, 12:27 pm

ಹುಬ್ಬಳ್ಳಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಮೊಕದ್ದಮೆಯ ವಿಚಾರಣೆಗೆ ಎಂದು ಆಗಮಿಸಿದ್ದ ನೂಲ್ವಿಯ ಯುವಕನೊಬ್ಬ ಕೋರ್ಟ್ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದು, ತಕ್ಷಣ ಆತನನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ.
ಮಂಗಳವಾರ ಮಧ್ಯಾಹ್ನ ಹುಬ್ಬಳ್ಳಿಯ ಕೋರ್ಟ್ ಆವರಣಕ್ಕೆ ಬಂದಿದ್ದ ನೂಲ್ವಿ ಗ್ರಾಮದ ಶಿವನಗೌಡ ಶಂಕರಗೌಡ ಸಿದ್ದನಗೌಡರ (28) ಆತ್ಮಹತ್ಯೆಗೆ ಯತ್ನಿಸಿರುವ ಯುವಕ.  ಹುಬ್ಬಳ್ಳಿಯ ನ್ಯಾಯಾಲಯದಲ್ಲಿ ಸಂಬಂಧಿಕರ ಮಧ್ಯೆ ಆಸ್ತಿಗೆ ಸಂಬಂಧಿಸಿದಂತೆ ವ್ಯಾಜ್ಯದ ವಿಚಾರಣೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಶಿವನಗೌಡ ಹುಬ್ಬಳ್ಳಿಯಲ್ಲಿನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಆತನಿಗೆ ತಂದೆ ತಾಯಿ ಯಾರೂ ಇಲ್ಲ ಎಂದು ತಿಳಿದುಬಂದಿದೆ. ಶಿವನಗೌಡನ ತಾಯಿ ಮತ್ತು ಸಹೋದರಿ ಕಳೆದ 8-10 ವರ್ಷಗಳ ಹಿಂದೆ ನಾಪತ್ತೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement