ಧಾರವಾಡ ಜಿಲ್ಲೆಯ ಆಪ್ನಲ್ಲಿ ಬಂಡಾಯ
ಹುಬ್ಬಳ್ಳಿ: ಆಮ್ ಆದ್ಮಿ ಪಾರ್ಟಿಯ ಪಾರ್ಟಿಯ ಸಕ್ರಿಯ ಕಾರ್ಯಕರ್ತ ಸಂಜಯ ಕೋಠಾರಿ ಅವರು ಬಂಡಾಯ ಅಭ್ಯರ್ಥಿಯಾಗಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಕ್ಕೆ ಜಿಲ್ಲೆಯ ಕೆಲವು ಕಾರ್ಯಕರ್ತರು ಅರ್ಜಿ ಸಲ್ಲಿಸಿದ್ದರು. ಆದರೆ ಪಕ್ಷದ ಮಾನದಂಡಕ್ಕೆ ತದ್ವಿರುದ್ಧವಾಗಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ.
ಈ ಕ್ರಮ ವಿರೋಧಿಸಿ ಆಮ್ ಆದ್ಮಿ ಪಕ್ಷದ ಕೋರ್ ಕಮೀಟಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡುವುದಕ್ಕೆ ತೀರ್ಮಾನಿಸುವುದರ ಜೊತೆಗೆ ಹುಬ್ಬಳ್ಳಿಯ ಸ್ಥಳೀಯ ನಿವಾಸಿ ಸಂಜಯ ಕೋಠಾರಿ ಅವರನ್ನು ಬಂಡಾಯ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಪಕ್ಷದ ಮಂಜುನಾಥ ಗದಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.