ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಪ್ರಜಾಪ್ರಭುತ್ವದ ಸದೃಢತೆಗೆ ಮತದಾನದಲ್ಲಿ ಪಾಲ್ಗೊಳ್ಳಿ

Lingaraj Badiger
Updated On : 21 Mar 2014, 11:53 am

ನವಲಗುಂದ: ಪ್ರಜಾಪ್ರಭುತ್ವದ ಸದೃಢತೆಗಾಗಿ ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಯೊಬ್ಬರು ಮತದಾನದ ಹಕ್ಕು ಪಡೆಯಬೇಕೆಂದು ಮತದಾರರ ಜಾಗ್ರತ ಸಮಿತಿ ನೋಡಲ್ ಅಧಿಕಾರಿ ಬಿ. ಶ್ರೀನಿವಾಸ ಹೇಳಿದರು. ತಾಲೂಕು ಸ್ವೀಪ್ ಸಮಿತಿ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನದ ಶೋಭಾಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಮತದಾನದ ನಿಗದಿತ ದಿನಾಂಕಕ್ಕೆ ಮತಗಟ್ಟೆಗೆ ಆಗಮಿಸಿ, ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ನಿರ್ಭಯದಿಂದ ಮತದಾನ ಮಾಡಬೇಕು ಎಂದು ಹೇಳಿದರು. ತಹಸೀಲ್ದಾರ್ ಕೆ.ಎಲ್. ಭಜಂತ್ರಿ ಮಾನವ ಸರಪಳಿ ರಚಿಸಿ ಮತದಾನ ಶ್ರೇಷ್ಠವಾದುದು ಪ್ರತಿಯೊಬ್ಬರೂ ಈ ಪವಿತ್ರ ಕಾರ್ಯದಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಮಾಯಾಚಾರ್ಯ, ಸ್ವೀಪ್ ಸಮಿತಿ ಸಂಚಾಲಕ ಎಸ್.ಎಸ್. ಸೌದಾಗರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಂ. ಸವದತ್ತಿ ನೇತೃತ್ವ ವಹಿಸಿದ್ದರು. ಜಾಥಾದಲ್ಲಿ ಪುರಸಭೆ ಮುಖ್ಯಾಧಿಕಾರಿ ಅಶೋಕ ಮಠದ, ಸಹಾಯಕ ಕೃಷಿ ನಿರ್ದೇಶಕ ವಿ.ವಿ. ವಿಠಲರಾವ್ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಶಂಕರ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement