ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಮಹಿಳೆ ಸುರಕ್ಷತೆ ದೇಶದ ಜವಾಬ್ದಾರಿ

Srinivasa Murthy VN
Updated On : 26 Mar 2014, 12:04 pm

ಹುಬ್ಬಳ್ಳಿ: ಉದ್ಯೋಗ ಕ್ಷೇತ್ರಕ್ಕೆ ಮಹಿಳೆ ಪ್ರವೇಶಿಸುತ್ತಿರುವ ಹಿನ್ನ್ನೆಲೆಯಲ್ಲಿ ಮಹಿಳೆ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ದೇಶದ ಜವಾಬ್ದಾರಿ ಆಗಿದ್ದರೆ, ಮಹಿಳೆಗೆ ಗೌರವಯುತ ಕೆಲಸದ ವಾತಾವರಣ ಸೃಷ್ಟಿಸುವುದು ನಮ್ಮ ಕರ್ತವ್ಯ ಎಂದು ಹೈಕೋರ್ಟ್ ನ್ಯಾಯಾಧೀಶ ಎ. ವಿ. ಚಂದ್ರಶೇಖರ ಹೇಳಿದರು.
ಮಂಗಳವಾರ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಮೇಲಿನ ಲೈಂಗಿಕ ಕಿರುಕುಳ ಕುರಿತು ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರ ವಿರುದ್ಧ ಎಲ್ಲ ಬಗೆಯ ತಾರತಮ್ಯ ನಿರ್ಮೂಲನೆಗಾಗಿ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾನೂನು ಮತ್ತು ಒಪ್ಪಂದಗಳನ್ನ್ನು ಮಾಡಿಕೊಂಡಿದ್ದರೂ ಸಹ ಮಹಿಳೆ ತನ್ನ್ನ ಸ್ವಾತಂತ್ರ್ಯ ಅನುಭವಿಸುವಲ್ಲಿ ಯಶಸ್ವಿಯಾಗಿಲ್ಲ.
ಅದೇ ರೀತಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ಮತ್ತು ಕರ್ನಾಟಕ ಕಾನೂನು ಸಂಸದೀಯ ಸುಧಾರಣಾ ಸಂಸ್ಥೆ ಇಂತಹ ವಿಚಾರಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಕಾನೂನು ಸಂಸದೀಯ ಸುಧಾರಣಾ ಸಂಸ್ಥೆ ಮುಖ್ಯಸ್ಥ ಕೆ.ಎಸ್. ಬಗಾಲೆ, ಇಲ್ಲಿಯವರೆಗೂ ಎಲ್ಲ ಕ್ಷೇತ್ರಗಳಿಗೂ ಸಂಬಂಧಿಸಿದಂತೆ ಕಾನೂನುಗಳನ್ನ್ನು ಮಾಡಿದ್ದರೂ ಅವುಗಳನ್ನು ಸರಿಯಾದ ರೀತಿಯಲ್ಲಿ ಅರ್ಥೈಸಿ ಚಾಲನೆ ನೀಡುವ ಕೆಲಸ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂದು ವಿಷಾದಿಸಿದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಆರ್. ಸುಬ್ರಹ್ಮಣ್ಯ, ಮಹಿಳೆಯರ ಸ್ಥಾನಮಾನ ಉತ್ತಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೊಳಿಸಿದ್ದರೂ ಪುರುಷರಂತೆ ಸಮಾನ ಅವಕಾಶಗಳನ್ನು ಪಡೆಯುವುದಕ್ಕೆ ಆಗುತ್ತಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿ, ಸರ್ಕಾರೇತರ ಸ್ವಯಂ ಸಂಸ್ಥೆಯ ಮಹಿಳಾ ಕಾರ್ಯಕರ್ತರು, ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿ ಇದ್ದರು. ಮೌಲ್ಯಮಾಪನ ವಿಭಾಗದ ಕುಲಸಚಿವ ಬಿ.ಎಸ್. ರೆಡ್ಡಿ ವಂದಿಸಿದರು. ಲಾ ಸ್ಕೂಲ್‌ನ ಡೀನ್ ಡಾ. ಸಿ. ಎಸ್. ಪಾಟೀಲ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement