ಶಿಕ್ಷಣದ ಗುಣಮಟ್ಟ ಹೆಚ್ಚಬೇಕಿದೆ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಮಾ. 28
ಬೌದ್ಧಿಕ, ಶೈಕ್ಷಣಿಕ ಹಾಗೂ ಮಾನವ ಸಂಪನ್ಮೂಲಗಳ ಆಧಾರದ ಮೇಲೆ ಉನ್ನತ ಶಿಕ್ಷಣದ ಪಠ್ಯಕ್ರಮ ರೂಪಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಂ.ಐ. ಸವದತ್ತಿ ಹೇಳಿದರು.
ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ಶುಕ್ರವಾರ ಆಯೋಜಿಸಿದ್ದ ಉನ್ನತ ಶಿಕ್ಷಣ ಕುರಿತು ಆಯೋಜಿಸಿದ್ದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಬೋಧನಾ ಕೌಶಲ್ಯ ಮತ್ತು ತರಗತಿಯ ಕಲಿಕಾ ವಿಧಾನಗಳು ಮುಂತಾದ ವಿಷಯಗಳಲ್ಲಿ ಶಿಕ್ಷಕರ ಜ್ಞಾನಮಟ್ಟ ವೃದ್ಧಿಸುವಂತಹ ತರಬೇತಿಯನ್ನು ಶಿಕ್ಷಕರಿಗೆ ನೀಡಬೇಕು ಎಂದರು.
ಉನ್ನ್ನತ ಶಿಕ್ಷಣದ ಗುಣಮಟ್ಟ ವೃದ್ಧಿಸುವ ಮತ್ತು ಅದನ್ನ್ನು ಕಾಯ್ದುಕೊಂಡು ಹೋಗುವ ಜವಾಬ್ದಾರಿ ಸಮಾಜ ಮತ್ತು ಸರ್ಕಾರದ ಮೇಲಿದೆ. ಹಾಗಾಗಿ, ಒಂದು ವೇಳೆ ಯಾವುದೇ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ವಿಫಲವಾದರೆ ಅಂತಹ ಸಂಸ್ಥೆ, ವಿಶ್ವವಿದ್ಯಾಲಯದ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ಎ. ಬಾರಿ, 21ನೇ ಶತಮಾನದ ಶೈಕ್ಷಣಿಕ ಹಾಗೂ ಜ್ಞಾನದ ಸವಾಲುಗಳನ್ನ್ನು ಎದುರಿಸುವ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಹೆಚ್ಚಿಸುವುದು ಹಾಗೂ ಎಲ್ಲ ಬಗೆಯ ಸ್ಪರ್ಧಾತ್ಮಕ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳನ್ನ್ನು ಮುಂಚೂಣಿಗೆ ತಂದು ನಿಲ್ಲಿಸುವ ಜವಾಬ್ದಾರಿ ಉನ್ನ್ನತ ಶಿಕ್ಷಣದ ಮೇಲೆ ಇದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಡಾ. ಟಿ.ಆರ್. ಸುಬ್ರಮಣ್ಯ ಮಾತನಾಡಿದರು.
ವೇದಿಕೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರೊ. ಆರ್.ಎಂ. ಪಾಟೀಲ, ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಪ್ರೊ. ಶೇಷಮೂರ್ತಿ, ಕಾನೂನು ವಿಶ್ವವಿದ್ಯಾಲಯದ ಕುಲಸಚಿವ ಟಿ. ವಿ. ಮಂಜುನಾಥ, ಮೌಲ್ಯಮಾಪನ ವಿಭಾಗದ ಕುಲಸಚಿವ ಡಾ. ಬಿ.ಎಸ್. ರೆಡ್ಡಿ, ಕಾನೂನು ಶಾಲೆ ನಿರ್ದೇಶಕ ಡಾ. ಸಿ. ಎಸ್. ಪಾಟೀಲ ಇದ್ದರು.