ಧಾರವಾಡ

ಹಾಪ್ಕಾಮ್ಸ್ಗೆ ಅವಿರೋಧ ಆಯ್ಕೆ

ಧಾರವಾಡ:  ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ಚುನಾವಣೆ ಜರುಗಿತು. ಇಲ್ಲಿನ ರೇಲ್ವೆ ಸ್ಟೇಶನ್ ರಸ್ತೆಯಲ್ಲಿರುವ ಸಂಘದ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರಭು ಕೇಶಗೊಂಡ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ತಂಬಾಕದ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಎರಡೂ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷರಾಗಿ ಪ್ರಭು ಕೇಶಗೊಂಡ ಮತ್ತು ಉಪಾಧ್ಯಕ್ಷರಾಗಿ ಬಸವರಾಜ ತಂಬಾಕದ ಮುಂದಿನ ಐದು ವರ್ಷಗಳ ಅವಧಿಗೆ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಎಸ್. ಗಾಡಗೋಳಿ ತಿಳಿಸಿದ್ದಾರೆ.  ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಎಚ್.ಸಿ. ಮೊರಬ, ಸಿದ್ದಣ್ಣ ಪ್ಯಾಟಿ, ಈಶ್ವರಗೌಡ ಪಾಟೀಲ, ಈಶ್ವರಚಂದ್ರ ಹೊಸಮನಿ, ರಾಜು ಸವದತ್ತಿ, ಅನಿತಾ ಹಂಪಣ್ಣವರ, ಶಕೀಲಾ ಪಾಟೀಲ, ಸಹಾಯಕ ಚುನಾವಣಾಧಿಕಾರಿ ಜಿ.ಬಿ. ಕಲಘಟಗಿ, ಸಂತೋಷ ಘೋರ್ಪಡೆ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!