ಧಾರವಾಡ

ಕ್ರೂಸರ್ ಡಿಕ್ಕಿ: ಆರು ಜನರಿಗೆ ಗಾಯ

ಧಾರವಾಡ: ಖಾಸಗಿ ಬಸ್‌ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ಚಾಲಕ ಸೇರಿದಂತೆ ಆರು ಜನ ಗಾಯಗೊಂಡ ಘಟನೆ ಬೈಪಾಸ್ ರಸ್ತೆಯ ಹಳಿಯಾಳ ಬ್ರಿಜ್ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ.
ನವಲಗುಂದ ತಾಲೂಕು ತಡಹಾಳ ಗ್ರಾಮದ ಲಕ್ಷ್ಮಣ ಬಸಪ್ಪ ಅಳಗವಾಡಿ, ಗಂಗವ್ವ ಬಸಪ್ಪ ಅಳಗವಾಡಿ, ಮಲ್ಲಪ್ಪ ಬಸಪ್ಪ ಅಳಗವಾಡಿ, ಚಿಕ್ಕಪ್ಪ ಪರತಗೌಡ ಬನಹಟ್ಟಿ, ಚಾಲಕ ಸುಭಾಸ ಕುಲಕರ್ಣಿ ಹಾಗೂ ನಿರ್ವಾಹಕ ಮಲ್ಲಿಕಾರ್ಜುನ ಗೋಮಾಡಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಮಲ್ಲಪ್ಪ ಅಳಗವಾಡಿ ಮತ್ತು ಚಿಕ್ಕಪ್ಪ ಬನಹಟ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಗಾಯಾಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮಣ ಅಳಗವಾಡಿ, ತಮ್ಮ ತಾಯಿ ಗಂಗವ್ವಳಿಗೆ ಚಿಕಿತ್ಸೆ ಕೊಡಿಸಲು ಹೋಗಿ ವಾಪಸ್ ಪತ್ರಿಕೆ ಸಾಗಿಸುವ ಖಾಸಗಿ ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದರು.
ಕ್ರೂಸರ್ ಚಾಲಕನ ನಿರ್ಲಕ್ಷ್ಯತನದಿಂದ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಸಂಚಾರಿ ಠಾಣಾ ಇನ್‌ಸ್ಪೆಕ್ಟರ್ ವಿಜಯಕುಮಾರ ತಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತಂತೆ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!