ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಸಚಿವರು ಶುದ್ಧ ಹಸ್ತರಾಗಿರಲಿ: ನಾಣಯ್ಯ

Rashmi Kasaragodu
Updated On : 14 May 2014, 2:13 am

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಚಿವರೆಲ್ಲರು ಶುದ್ಧಹಸ್ತರಾಗಿರುವಂತೆ ನೋಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಭರವಸೆಗಳ ಸಮಿತಿ ಅಧ್ಯಕ್ಷ ಎಂ.ಸಿ. ನಾಣಯ್ಯ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿರುವ ಎಲ್ಲ ಕಾರ್ಯಗಳು ತೃಪ್ತಿಕರವಾಗಿಲ್ಲ. ಕೆಲವು ಯೋಜನೆಗಳು ಉತ್ತಮವಾಗಿದ್ದರೂ ಪರಿಣಾಮಕಾರಿಯಾಗಿ ಜಾರಿಗೆ ಬರುವ ಅಗತ್ಯವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಶಾಸಕರು ಮತ್ತು ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಈ ಸರ್ಕಾರದ ಅವಧಿಯಲ್ಲಿ ನಡೆದಿರುವ ಕಾರ್ಯಗಳು ಹೇಳಿಕೊಳ್ಳುವಷ್ಟು ಉತ್ತಮವಾಗಿಯೂ ಇಲ್ಲ, ಕೆಟ್ಟದ್ದಾಗಿಯೂ ಇಲ್ಲ ಎಂದರು.
ಸಮಿತಿ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ವಯಸ್ಸಾಗಿರುವ ಸಚಿವರಿಂದ ಯಾವುದೇ ಕೆಲಸಗಳು ಆಗುತ್ತಿಲ್ಲ. ಯುವ ಸಚಿವರು ಮಾತ್ರ ರಾಜ್ಯದಾದ್ಯಂತ ಓಡಾಡಿ ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇಡೀ ರಾಜ್ಯದ ಅಭಿವೃದ್ಧಿಯತ್ತ ಸಚಿವರು ಗಮನ ಹರಿಸಬೇಕು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement